ಮದ್ಯ ಉದ್ದಿಮೆಗೆ ನೀರು ಸರಬರಾಜು ನಿಲ್ಲಿಸುವಂತೆ ಕೋರಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಮಹಾರಾಷ್ಟ್ರ ರಾಜ್ಯದಲ್ಲಿ ನೀರಿನ ತೊಂದರೆ ಉಲ್ಬಣವಾಗುತ್ತಿರುವ ಸಂದರ್ಭದಲ್ಲಿ ಮದ್ಯ ಉತ್ಪಾದನಾ ಸಂಸ್ಥೆಗಳಿಗೆ ನೀರು ಸರಬರಾಜನ್ನು ನಿಲ್ಲಿಸುವಂತೆ ಕೋರಿರುವ ಅರ್ಜಿಯನ್ನು ಮುಂದಿನ ವಾರ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಮಹಾರಾಷ್ಟ್ರ ರಾಜ್ಯದಲ್ಲಿ ನೀರಿನ ತೊಂದರೆ ಉಲ್ಬಣವಾಗುತ್ತಿರುವ ಸಂದರ್ಭದಲ್ಲಿ ಮದ್ಯ ಉತ್ಪಾದನಾ ಸಂಸ್ಥೆಗಳಿಗೆ ನೀರು ಸರಬರಾಜನ್ನು ನಿಲ್ಲಿಸುವಂತೆ ಕೋರಿರುವ ಅರ್ಜಿಯನ್ನು ಮುಂದಿನ ವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ಅರ್ಜಿದಾರ ಈ ವಿಷಯವನ್ನು ಕೋರ್ಟ್ ಗೆ ತಿಳಿಸಿ ಬೇಗನೆ ವಿಚಾರಣೆ ನಡೆಸುವಂತೆ ಕೋರಿದ್ದಕ್ಕೆ ನ್ಯಾಯಾಧೀಶ ಅಭಯ್ ಮನೋಹರ್ ಸಾಪ್ರೆ ಮುಂದಾಳತ್ವದ ಪೀಠ ಮುಂದಿನ ವಾರ ವಿಚಾರಣೆ ನಡೆಸಲು ಒಪ್ಪಿಕೊಂಡಿದೆ.

ಮೇ ೧೦ ರಿಂದ ಜುಲೈ ಅಂತ್ಯದವರೆಗೆ ಬರಪೀಡಿತ ಮಾರಾಠಾವಾಡಾ ಪ್ರದೇಶದಲ್ಲಿ ಮದ್ಯ ಉದ್ದಿಮೆಗೆ ೬೦% ನೀರು ಕಡಿತಗೊಳಿಸುವಂತೆ ಮತ್ತು ಇತರ ಉದ್ದಿಮೆಗಳಿಗೆ ೨೫% ನೀರು ಕಡಿತಗೊಳಿಸುವಂತೆ ಬಾಂಬೆ ಹೈಕೋರ್ಟ್ ನ ಔರಂಗಾಬಾದ್ ಪೀಠ ಆದೇಶ ನೀಡಿತ್ತು ಎನ್ನುವುದನ್ನು ಸುಪ್ರೀಮ್ ಕೋರ್ಟ್ ಗೆ ಅರ್ಜಿದಾರ ತಿಳಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾಗಿರುವ ಅರ್ಜಿದಾರರು ಈ ೪೦% ನೀರು ಸರಬರಾಜನ್ನು ಕೂಡ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

ಈ ಹಿಂದೆ ನೀರು ಪೋಲಾಗುವುದೆಂದು ಐಪಿಎಲ್ ಪಂದ್ಯಗಳನ್ನು ಮಹಾರಾಷ್ಟ್ರದಿಂದಾಚೆಗೆ ನಿಗದಿಪಡಿಸಲು ನೀಡಿದ್ದ ಬಾಂಬೆ ಹೈಕೋರ್ಟ್ ತೀರ್ಪನ್ನು ಸುಪ್ರೀಮ್ ಕೋರ್ಟ್ ಎತ್ತಿಹಿಡಿದಿದ್ದರಿಂದ ಈ ವಿಚಾರಣೆ ಮಹತ್ವ ಪಡೆದುಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com