ಬೆಂಗಳೂರಿನ ರಸ್ತೆಗಳ ಅವ್ಯವಸ್ಥೆ: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ತರಾಟೆ

ಬೆಂಗಳೂರಿನ ರಸ್ತೆಗಳ ಅವ್ಯವಸ್ಥೆಯ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಬೆಂಗಳೂರಿನ ರಸ್ತೆಗಳ ಅವ್ಯವಸ್ಥೆಯ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಸ್ತೆಯಲ್ಲಿ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಿ ಎಂದು ಎಚ್ಚರಿಕೆ ನೀಡಿದ್ದಾರೆ.
ಇಂದು ಗೃಹ ಕಚೇರಿ ಕೃಷ್ಣದಲ್ಲಿ ಬಿಬಿಎಂಪಿ ಅಧಿಕಾರಿಗಳೊಂದಿಗೆ ದಿಢೀರ್ ಸಭೆ ನಡೆಸಿದ ಸಿಎಂ ಮಳೆ ಆರಂಭವಾಗುವ ಮೊದಲು ರಸ್ತೆಅಭಿವೃದ್ದಿ ಹಾಗೂ ಕಸದ ರಾಶಿಯನ್ನು ತೆರವುಗೊಳಿಸಬೇಕು ಎಂದು ಬಿಬಿಎಂಪಿ ಆಯುಕ್ತರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮಳೆ ಆರಂಭವಾಗುವ ಮೊದಲು ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕು. ರಸ್ತೆ ಗುಣಮಟ್ಟ ಸರಿಯಿಲ್ಲವೆಂದಲ್ಲಿ ಅದಕ್ಕೆ ಇಂಜಿನಿಯರ್ ಗಳೇ ನೇರ ಹೊಣೆ. ಮಳೆ ಬಂದ ಬಳಿಕ ರಸ್ತೆ ಅವ್ಯವಸ್ಥೆ ಕಂಡುಬಂದಲ್ಲಿ ಇಂಜಿನಿಯರ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಸಿಎಂ ಸೂಚನೆ ನೀಡಿದ್ದಾರೆ.
ಮಳೆ ಆರಂಭವಾಗುವುದರೊಳಗೆ ಅಲ್ಲಲ್ಲಿ ರಾಶಿ ಬಿದ್ದಿರುವ ತ್ಯಾಜ್ಯವನ್ನು ತೆರವುಗೊಳಿಸಬೇಕು. ಮಳೆಗಾಲದಲ್ಲಿ ಒಂದೇ ಒಂದು ದೂರು ಬರಬಾರದು ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com