ನವದೆಹಲಿ: 2015ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗ, ನಾಗರಿಕ ಸೇವಾ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳನ್ನು ಪ್ರಕಟಿಸಲಾಗಿದೆ.
ಐಎಎಸ್, ಐಎಫ್ ಎಸ್ ಮತ್ತು ಐಪಿಎಸ್ ಹುದ್ದೆಗಳಿಗೆ ಕೇಂದ್ರ ಸರ್ಕಾರ ಪ್ರತಿವರ್ಷ ಮೂರು ಹಂತಗಳಲ್ಲಿ ಪರೀಕ್ಷೆ ನಡೆಸುತ್ತದೆ. ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ತಮ್ಮ ಅಂಕಗಳನ್ನು ಆಯೋಗದ ವೆಬ್ ಸೈಟ್ www.upsc.gov.in ನಲ್ಲಿ ವೀಕ್ಷಿಸಬಹುದು.