ನಿಗಮ, ಮಂಡಳಿಗಳಿಗೆ ನೂತನ ಅಧ್ಯಕ್ಷರ ನೇಮಕ ಮಾಡಿ ಸಿಎಂ ಆದೇಶ

ರಾಜ್ಯ ಸರ್ಕಾರದ ಒಡೆತನದಲ್ಲಿರುವ 91 ನಿಗಮ ಮಂಡಳಿಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ....
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 
ಬೆಂಗಳೂರು: ರಾಜ್ಯ ಸರ್ಕಾರದ ಒಡೆತನದಲ್ಲಿರುವ 91 ನಿಗಮ ಮಂಡಳಿಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ,
ಒಟ್ಟು 91 ನಿಗಮ, ಮಂಡಳಿಗಳ ಪೈಕಿ 21ಕ್ಕೆ ಶಾಸಕರನ್ನು ಹಾಗೂ ಇತರೆ 70 ನಿಗಮ, ಮಂಡಳಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ.
ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರಿಗೂ ನಿಗಮ ಮಂಡಳಿ ನೇಮಕಾತಿಯಲ್ಲಿ ಸಿಎಂ ಸ್ಥಾನ ನೀಡಿದ್ದು, ಕರ್ನಾಕಟ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ.
ಮೈಸೂರಿನ ಪಿರಿಯಾಪಟ್ಟಣ ಶಾಸಕ ಕೆ.ವೆಂಕಟೇಶ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಅಧ್ಯಕ್ಷರನ್ನಾಗಿ, ಕರ್ನಾಟಕ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷರಾಗಿ ಅಫ್ಜಲಪುರ ಶಾಸಕ ಮಾಲೀಕಯ್ಯ ಗುತ್ತೆದಾರ್, ಆಹಾರ ನಿಗಮದ ಅಧ್ಯಕ್ಷರಾಗಿ ಎಂಟಿಬಿ ನಾಗರಾಜ್ , ಸ್ಲಮ್ ಬೋರ್ಡ್ ಅಧ್ಯಕ್ಷರಾಗಿ ಆರ್ ವಿ ದೇವರಾಜ್, ಭೂಸೇನಾ ನಿಗಮ ನಿಯಮಿತದ ಅಧ್ಯಕ್ಷರಾಗಿ ರಾಜಶೇಖರ್, ರಾಜ್ಯ ವಿದ್ಯುನ್ಮಾನ ನಿಗಮದ ಅಧ್ಯಕ್ಷರಾಗಿ ಡಿ ಸುಧಾಕರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಶಾರದಾ ಮೋಹನ್ ಶೆಟ್ಟಿ, ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಂಪಯ್ಯ, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಪುಟ್ಟರಂಗಶೆಟ್ಟಿ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಸಂತ ಬಂಗೇರ ಹಾಗೂ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರಾಗಿ ಶಾಸಕ ಬಿಆರ್ ಯಾವಗಲ್ ಅವರು ನೇಮಕಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com