ಶಬರಿಮಲೆ: ಸುಪ್ರೀಂನಲ್ಲಿ ಯು ಟರ್ನ್ ಹೊಡೆದ ಕೇರಳ ಸರ್ಕಾರ, ಮಹಿಳೆಯರ ಪ್ರವೇಶಕ್ಕೆ ಅನುಮತಿ

ಶಬರಿಮಲೈ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಕೇರಳ ಎಲ್ ಡಿಎಫ್ ಸರ್ಕಾರ ಯು ಟರ್ನ್ ಹೊಡೆದಿದ್ದು,...
ಶಬರಿಮಲೆ ದೇವಸ್ಥಾನ
ಶಬರಿಮಲೆ ದೇವಸ್ಥಾನ
ನವದೆಹಲಿ: ಶಬರಿಮಲೈ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಕೇರಳ ಎಲ್ ಡಿಎಫ್ ಸರ್ಕಾರ ಯು ಟರ್ನ್ ಹೊಡೆದಿದ್ದು, ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಲು ಸಿದ್ಧ ಎಂದು ಸೋಮವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಎಲ್ಲಾ ವಯೋಮಾನದ ಮಹಿಳೆಯರಿಗೂ ಶಬರಿಮಲೈ ದೇವಸ್ಥಾನ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಪಿನರಾಯಿ ವಿಜಯನ್ ಸರ್ಕಾರ ಇಂದು ಸುಪ್ರೀಂ ಕೋರ್ಟ್ ಪ್ರಮಾಣಪತ್ರ ಸಲ್ಲಿಸಿದ್ದು, ಕೋರ್ಟ್ ವಿಚಾರಣೆಯನ್ನು ಫೆ.17ಕ್ಕೆ ಮುಂದೂಡಿದೆ.
10 ವರ್ಷದಿಂದ 50 ವರ್ಷದ ಮಹಿಳೆಯರಿಗೆ ದೇವಸ್ಥಾನ ಪ್ರವೇಶಕ್ಕೆ ವಿಧಿಸಿದ್ದ ನಿಷೇಧ ತೆರವುಗೊಳಿಸಲು ಈ ಹಿಂದಿನ ಉಮನ್ ಚಾಂಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು.
ನ್ಯಾಯಾಂಗದ ಮೂಲಕ ಭಕ್ತರ ನಂಬಿಕೆಯನ್ನು ಬದಲಾಯಿಸಲು ಸಾಧ್ಯವಿಲ್ಲ. ಧಾರ್ಮಿಕ ವಿಚಾರದಲ್ಲಿ ದೇವಸ್ಥಾನದ ಅರ್ಚಕರ ನಿರ್ಧಾರವೇ ಅಂತಿಮ ಎಂದು ಚಾಂಡಿ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿತ್ತು.
ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಮಹಿಳೆಯರ ಮೇಲಿನ ನಿಷೇಧ ದೇಗುಲದ ಸಂಪ್ರದಾಯ ಹಾಗೂ ಪದ್ಧತಿಯ ಭಾಗವಾಗಿದ್ದು, ಅದು ಮುಂದುವರೆಯಬೇಕು ಎಂದು ತಿರುವಾಂಕೂರು ದೇವಸ್ವಂ ಮಂಡಳಿ(ಟಿಡಿಬಿ) ಅಭಿಪ್ರಾಯವ್ಯಕ್ತಪಡಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com