ಇನ್ನೂ 3 ದಿನ ಹಳೆ ನೋಟ್ ಗಳ ಸ್ವೀಕಾರ, ಹೆದ್ದಾರಿಗಳಲ್ಲಿ ಟೋಲ್ ರದ್ದು ನ.14ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿರುವ ಹಿನ್ನೆಲೆಯಲ್ಲಿ ನವೆಂಬರ್ 11ರ ಮಧ್ಯರಾತ್ರಿಯವರೆಗೆ ದೇಶಾದ್ಯಂತ ಎಲ್ಲಾ ರಾಷ್ಟ್ರೀಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿರುವ ಹಿನ್ನೆಲೆಯಲ್ಲಿ ನವೆಂಬರ್ 11ರ ಮಧ್ಯರಾತ್ರಿಯವರೆಗೆ ದೇಶಾದ್ಯಂತ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸುವುದನ್ನು ರದ್ದುಗೊಳಿಸಿದ್ದ ಕೇಂದ್ರ ಸರ್ಕಾರ ಇದೀಗ ಅದನ್ನು ನವೆಂಬರ್ 14ರ ಮಧ್ಯರಾತ್ರಿಯವರೆಗೆ ವಿಸ್ತರಿಸಿದೆ. ಅಲ್ಲದೆ ಆಸ್ಪತ್ರೆ, ಮೆಡಿಕಲ್ ಶಾಪ್, ರೈಲ್ವೆ, ಬಸ್ ನಿಲ್ದಾಣ ಹಾಗೂ ಪೆಟ್ರೋಲ್ ಬಂಕ್ ಗಳಲ್ಲಿ ಇನ್ನೂ ಮೂರು ದಿನ ಹಳೆ ನೋಟ್ ಗಳನ್ನು ಸ್ವೀಕರಿಸಬಹುದು ಎಂದು ಶುಕ್ರವಾರ ಹೇಳಿದೆ.
ಸುಗಮ ಸಂಚಾರಕ್ಕಾಗಿ ನವೆಂಬರ್ 11ರವರೆಗೆ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ರದ್ದುಗೊಳಿಸಲಾಗಿತ್ತು. ಆದರೆ ಬ್ಯಾಂಕ್ ಗಳಿಂದ ಹಣ ವಿನಿಮಯ ಮಾಡಿಕೊಳ್ಳಲು ಮತ್ತು ಎಟಿಎಂನಿಂದ ನಗದು ಪಡೆಯಲು ಜನ ಇನ್ನೂ ಪರದಾಡುತ್ತಿರುವ ಹಿನ್ನೆಲೆಯಲ್ಲಿ ಅದನ್ನು ನವೆಂಬರ್ 14ರವರೆಗೆ ವಿಸ್ತರಿಸಲಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ.
ಕಳೆದ ಮಂಗಳವಾರ ದಿಢೀರ್ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಪ್ಪು ಹಣ, ಭ್ರಷ್ಟಾಚಾರ ಹಾಗೂ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ನಕಲಿ ನೋಟುಗಳ ಹಾವಳಿ ತಡೆಯುವುದಕ್ಕಾಗಿ ಇಂದು ಮಧ್ಯರಾತ್ರಿಯಿಂದಲೇ 500 ಹಾಗೂ 1000 ರುಪಾಯಿ ನೋಟ್ ಗಳಿಗೆ ನಿಷೇಧ ಹೇರಲಾಗಿದೆ ಎಂದು ಘೋಷಿಸಿದ್ದರು. ಅಂದಿನಿಂದ ದೇಶಾದ್ಯಂತ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com