ಭಾರತಕ್ಕೆ ಯುಎನ್ಎಸ್ ಸಿ ಸದಸ್ಯತ್ವಕ್ಕೆ ಭದ್ರತಾ ಮಂಡಳಿಯ ಬಹುತೇಕ ಸದಸ್ಯ ರಾಷ್ಟ್ರಗಳ ಬೆಂಬಲ

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಸದಸ್ಯತ್ವಕ್ಕೆ ಮಂಡಳಿಯ ಬಹುತೇಕ ಸದಸ್ಯ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸಿವೆ.
ಯುಎನ್ಎಸ್ ಸಿ
ಯುಎನ್ಎಸ್ ಸಿ
Updated on: 
ವಿಶ್ವಸಂಸ್ಥೆ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಸದಸ್ಯತ್ವಕ್ಕೆ ಮಂಡಳಿಯ ಬಹುತೇಕ ಸದಸ್ಯ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸಿವೆ. 
ಈಗಾಗಲೇ ಸದಸ್ಯ ರಾಷ್ಟ್ರಗಳಾಗಿರುವ ಬ್ರಿಟನ್, ಫ್ರಾನ್ಸ್ ಸೇರಿದಂತೆ ಹಲವು ರಾಷ್ಟ್ರಗಳು ಭಾರತದ ಯುಎನ್ಎಸ್ ಸಿ ಸದಸ್ಯತ್ವಕ್ಕೆ ಬೆಂಬಲ ವ್ಯಕ್ತಪಡಿಸಿವೆ. ಕಳೆದ ವಾರ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದ ಸುಮಾರು 50 ಕ್ಕೂ ಹೆಚ್ಚು ಪ್ರತಿನಿಧಿಗಳು ಯುಎನ್ಎಸ್ ಸಿ ಸುಧಾರಣಾ ಕ್ರಮಗಳ ಬಗ್ಗೆ ಮಾತನಾಡಿದ್ದು, ಭಾರತ, ಜಪಾನ್, ಜರ್ಮನಿ ಬ್ರೆಜಿಲ್ ಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಪ್ರಾತಿನಿಧ್ಯ ನೀಡುವುದರ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 
ಬ್ರಿಟನ್, ಫ್ರಾನ್ಸ್ ಸಹ ಭಾರತ, ಬ್ರೆಜಿಲ್, ಜರ್ಮನಿ ಗೆ ಭದ್ರತಾ ಮಂಡಳಿಯ ಸದಸ್ಯತ್ವ ನೀಡಬೇಕೆಂಬ ಬಲವಾದ ಅಭಿಪ್ರಾಯ ವ್ಯಕ್ತಪಡಿಸಿದ್ದು, ಭದ್ರತಾ ಮಂಡಳಿ ಸದಸ್ಯ ರಾಷ್ಟ್ರಗಳ ಸಂಖ್ಯೆಯನ್ನು ವಿಸ್ತರಿಸುವುದರ ಪರವಾಗಿದ್ದು, ಯುಎನ್ಎಸ್ ಸಿ ವಿಸ್ತರಣೆಯನ್ನು ಪ್ರಾತಿನಿಧ್ಯದ ಸಮತೋಲನ ಕಾಯ್ದುಕೊಳ್ಳಲು ನೆರವಾಗಲಿದೆ, ಕೆಲವು ದಿನಗಳ ಹಿಂದೆ ಭಾರತಕ್ಕೆ ಭೇಟಿ ನೀಡಿದ್ದ  ಬ್ರಿಟನ್ ಪ್ರಧಾನಿ ಥೆರೆಸಾ ಮೇ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸಿದ್ದಾರೆ ಎಂದು ಬ್ರಿಟನ್ ನ ಪ್ರತಿನಿಧಿ ಸಭೆಯಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com