ಸರ್ಕಾರಕ್ಕೆ ಮತ್ತೆ ಹಿನ್ನಡೆ, ಡಿ. 6ರವರೆಗೆ ಸ್ಟೀಲ್ ಫ್ಲೈಓವರ್ ಕಾಮಗಾರಿ ಚಾಲನೆಗೆ ಬ್ರೇಕ್

ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೆ ನಿರ್ಮಿಸಲು ಉದ್ದೇಶಿಸಿರುವ ಉಕ್ಕಿನ ಸೇತುವೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದ್ದು,...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೆ ನಿರ್ಮಿಸಲು ಉದ್ದೇಶಿಸಿರುವ ಉಕ್ಕಿನ ಸೇತುವೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಸೇತುವೆ ನಿರ್ಮಾಣ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ನೀಡಿದ್ದ ತಡೆಯಾಜ್ಞೆಯನ್ನು ಶುಕ್ರವಾರ ಮತ್ತೆ ವಿಸ್ತರಿಸಲಾಗಿದೆ.
ಬೆಂಗಳೂರಿನ ನಾಗರಿಕರ ಕ್ರಿಯಾ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಎನ್ ಜಿಟಿ, ಡಿಸೆಂಬರ್ 6ರ ತನಕ ಯಾವುದೇ ಕಾಮಗಾರಿ ನಡೆಸದಂತೆ ಆದೇಶಿಸಿ, ವಿಚಾರಣೆಯನ್ನು ಮುಂದೂಡಿದೆ. 
ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಮಧುಸೂದನ್ ನಾಯ್ಕ್ ಅವರು ಲಿಖಿತ ಮನವಿ ಸಲ್ಲಿಸಿ, ಉಕ್ಕಿನ ಸೇತುವೆಯಿಂದ ಪರಿಸರಕ್ಕೆ ಯಾವುದೇ ರೀತಿ ಹಾನಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ಉಕ್ಕಿನ ಸೇತುವೆ ನಿರ್ಮಾಣಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಈ ಮುಂಚೆ ನಾಲ್ಕುವಾರಗಳ ತಡೆ ನೀಡಿತ್ತು. ಎನ್ ಜಿಟಿ ನೀಡಿರುವ ತಡೆಯಾಜ್ಞೆ ತೆರವುಗೊಳಿಸುವಂತೆ ಕರ್ನಾಟಕ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com