ಕಾವೇರಿ ತಿರ್ಪು: ಕೇಂದ್ರ ಸರ್ಕಾರಕ್ಕೆ ಸಿಎಂ ಅಭಿನಂದನೆ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ನೀಡಿರುವ ಆದೇಶದಿಂದ ಸಮಾಧಾನಗೊಂಡಿರುವ ಮುಖ್ಯಮಂತ್ರಿ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 
ಬೆಂಗಳೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ನೀಡಿರುವ ಆದೇಶದಿಂದ ಸಮಾಧಾನಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮ್ಯ ಅವರು ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ರಾಜ್ಯದ ಕೇಂದ್ರ ಸಚಿವರಿಗೆ ಮಂಗಳವಾರ ಅಭಿನಂದನೆ ಸಲ್ಲಿಸಿದ್ದಾರೆ.
ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಆದೇಶದ ತಡೆ ಹಾಗೂ ಅಕ್ಟೋಬರ್ 7ರಿಂದ 18ರವರೆಗೆ ನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದ ನಂತರ ಟ್ವೀಟ್ ಮಾಡಿರುವ ಸಿಎಂ,
ಕಾವೇರಿ ನದಿ ನೀರಿನ ವಿಚಾರದಲ್ಲಿ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ. ಅಲ್ಲದೆ ರಾಜ್ಯ ಸರ್ಕಾರದ ಜೊತೆಗೆ ಸಹಕರಿಸಿದ ಎಲ್ಲ ರಾಜಕೀಯ ಪಕ್ಷಗಳಿಗೂ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ.
ಕಾವೇರಿ ನಿರ್ವಹಣಾ ಮಂಡಳಿ ರಚನೆ ಹಾಗೂ ಸೆಪ್ಟೆಂಬರ್ 30ರ ಆದೇಶದ ಕುರಿತು ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರ ಹಾಗೂ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ಅ.7ರಿಂದ 18ರವರೆಗೆ ನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಅಲ್ಲದೆ ಸೆ.20ರ ಹಾಗೂ ಸೆ.30ರಂದು ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಆದೇಶಕ್ಕೆ ಸದ್ಯ ತಡೆ ನೀಡಿ ವಿಚಾರಣೆಯನ್ನು ಅ.18ಕ್ಕೆ ಮುಂಡೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com