ಸುಪ್ರೀಂ ಕೋರ್ಟ್ ಆದೇಶ ಪಾಲನೆ ಕರ್ನಾಟಕಕ್ಕೆ ಅನಿವಾರ್ಯ: ದೇವೇಗೌಡ

ಸುಪ್ರೀಂ ಕೋರ್ಟ್ ಮಂಗಳವಾರ ಮತ್ತೆ ತಮಿಳುನಾಡಿಗೆ 22 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದ್ದು,...
ಎಚ್.ಡಿ.ದೇವೇಗೌಡ
ಎಚ್.ಡಿ.ದೇವೇಗೌಡ
ಬೆಂಗಳೂರು: ಸುಪ್ರೀಂ ಕೋರ್ಟ್ ಮಂಗಳವಾರ ಮತ್ತೆ ತಮಿಳುನಾಡಿಗೆ 22 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದ್ದು, ಈ ಆದೇಶ ಪಾಲಿಸುವುದು ಕರ್ನಾಟಕಕ್ಕೆ ಅನಿವಾರ್ಯವಾಗಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ, ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠದ ಎದುರು ರಾಜ್ಯದ ಪರವಾಗಿ ವಕೀಲ ಫಾಲಿ ಎಸ್ ನಾರಿಮನ್ ಅವರು ಸಮರ್ಪಕವಾದ ಮಂಡಿಸಿದ್ದಾರೆ. ಆದರೂ ಅಕ್ಟೋಬರ್ 7ರಿಂದ 18ರವರೆಗೆ ನಿತ್ಯ 2 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶಿಸಿದೆ. ಈಗ ಆದೇಶ ಪಾಲಿಸುವುದು ಅನಿವಾರ್ಯ ಎಂದರು,
ಇದೇ ವೇಳೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದು, ಈ ಸಂಬಂಧ ಕೇಂದ್ರ ಸರ್ಕಾರವನ್ನು ಹಾಗೂ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಅವರನ್ನು ಅಭಿನಂದಿಸುತ್ತೇನೆ ಎಂದರು.
ಸುಪ್ರೀಂಕೋರ್ಟ್​ಗೆ ನಾವು ಯಾವತ್ತು ಅಗೌರವ ತೋರಿಲ್ಲ. ಅವರ ಆದೇಶ ಪಾಲನೆ ಮಾಡುತ್ತಲೇ ಬಂದಿದ್ದೇವೆ. ಈಗ ತಜ್ಞರ ಸಮಿತಿ ಕಳುಹಿಸಲು ಸುಪ್ರೀಂಕೋರ್ಟ್ ಹೇಳಿದೆ. ಸಮಿತಿಯಲ್ಲಿ ನಾಲ್ಕು ರಾಜ್ಯಗಳ ಮುಖ್ಯ ಎಂಜಿನಿಯರ್​ ಇರುತ್ತಾರೆ. ನಮಗೆ ಅನ್ಯಾಯವಾಗಲ್ಲ ಎಂದು ಭಾವಿಸಿರುವುದಾಗಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com