ಪಾಕಿಸ್ತಾನದಲ್ಲಿ ಕೇಜ್ರಿವಾಲ್ ಟಾಪ್ ಟ್ರೆಂಡ್, #PakStandsWithKejriwal
ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಸೀಮಿತ ದಾಳಿ ನಡೆಸಿದ ಬಗ್ಗೆ ಪುರಾವೆ ಕೇಳಿದ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್...

Published On :
ನವದೆಹಲಿ: ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಸೀಮಿತ ದಾಳಿ ನಡೆಸಿದ ಬಗ್ಗೆ ಪುರಾವೆ ಕೇಳಿದ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಈಗ ಪಾಕ್ ಸಾಮಾಜಿಕ ತಾಣಗಳ ಟಾಪ್ ಟ್ರೆಂಡ್ ಆಗಿದ್ದಾರೆ.
#PakStandsWithKejriwal ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ಟ್ವೀಟರ್ ನಲ್ಲಿ ಸಂದೇಶಗಳು ಹರಿದಾಡುತ್ತಿವೆ. ಈ ಮೂಲಕ ದೆಹಲಿ ಸಿಎಂ ಪಾಕಿಸ್ತಾನಿಗಳ ಸಾಮಾಜಿಕ ತಾಣದಲ್ಲಿ ಸತ್ಯ ಹೇಳು ಹೀರೋ ಆಗಿ ಹೊರಹೊಮ್ಮಿದ್ದಾರೆ.
ಸೀಮಿತ ದಾಳಿಯ ಬಗ್ಗೆ ಸಾಕ್ಷ್ಯಗಳನ್ನು ನೀಡಬೇಕು ಎಂದು ನರೇಂದ್ರ ಮೋದಿ ಸರ್ಕಾರವನ್ನು ಒತ್ತಾಯಿಸಿದ್ದ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಮಸಿ ಎರಚಲಾಗಿದೆ ಎಂದು ಅಲ್ಲಿನ ಡಾನ್ ಪತ್ರಿಕೆ ವರದಿ ಮಾಡಿದೆ.
ಕಳೆದ ಸೋಮವಾರ ಕೇಜ್ರಿವಾಲ್ ಅವರು ಕೇಂದ್ರ ಸರ್ಕಾರ ಸೀಮಿತ ದಾಳಿಯ ಸಾಕ್ಷ್ಯಗಳನ್ನು ಬಹಿರಂಗಪಡಿಸುವ ಮೂಲಕ ಪಾಕಿಸ್ತಾನದ ಬಣ್ಣವನ್ನು ಬಯಲು ಮಾಡಬೇಕು ಎಂದು ಆಗ್ರಹಿಸಿದ್ದರು, ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


