ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಅಕ್ಟೋಬರ್ 21ರಂದು ಕರ್ನಾಟಕ, ಗೋವಾ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಮುಂಬೈನಲ್ಲಿ ಸಭೆ ನಿಗದಿಯಾಗಿದೆ. ಹೀಗಾಗಿ, ಅಂದಿನ ಸಭೆಯಲ್ಲಿ ರಾಜ್ಯದ ನಿಲುವು ಯಾವ ರೀತಿ ಇರಬೇಕು ಎಂಬುದರ ಬಗ್ಗೆ ಚರ್ಚಿಸಲು ಬೆಂಗಳೂರಿನಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿದೆ.