ಬೆಂಗಳೂರಿನಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ರ ವಿಮಾನ ತುರ್ತು ಭೂಸ್ಪರ್ಶ!

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿದ್ದ ವಿಶೇಷ ವಿಮಾನ ಶನಿವಾರ ಬೆಳಗ್ಗೆ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ತಿಳಿದುಬಂದಿದೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ವಿಶೇಷ ವಿಮಾನ (ಸಂಗ್ರಹ ಚಿತ್ರ)
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ವಿಶೇಷ ವಿಮಾನ (ಸಂಗ್ರಹ ಚಿತ್ರ)

ಬೆಂಗಳೂರು: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿದ್ದ ವಿಶೇಷ ವಿಮಾನ ಶನಿವಾರ ಬೆಳಗ್ಗೆ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ತಿಳಿದುಬಂದಿದೆ.

ಇಂದಿನಿಂದ ಗೋವಾದಲ್ಲಿ ಆರಂಭಗೊಳ್ಳಲಿರುವ 2 ದಿನಗಳ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿರುವ ರಷ್ಯಾ ಅಧ್ಯಕ್ಷ ಪುಟಿನ್ ಅವರು ಗೋವಾದ ಪಣಜಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಆದರೆ ಹವಮಾನ ವೈಪರಿತ್ಯದಿಂದಾಗಿ ಪುಟಿನ್ ಅವರಿದ್ದ ವಿಶೇಷ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ತಿಳಿದುಬಂದಿದೆ.

ಸುಮಾರು 15 ನಿಮಿಷಗಳ ಕಾಲ ಪುಟಿನ್ ಅವರ ವಿಶೇಷ ವಿಮಾನ ಬೆಂಗಳೂರಿನಲ್ಲೇ ಇದ್ದು, ಬಳಿಕ ಗೋವಾದತ್ತ ಪ್ರಯಾಣ ಬೆಳೆಸಿದೆ ಎಂದು ತಿಳಿದುಬಂದಿದೆ.

ಗೋವಾ ರಾಜಧಾನಿ ಪಣಜಿಯಲ್ಲಿ ಇಂದಿನಿಂದ 2 ದಿನಗಳ ಕಾಲ ವಾರ್ಷಿಕ ಬ್ರಿಕ್ಸ್ ಶೃಂಗಸಭೆ ನಡೆಯಲಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ,ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ಬ್ರೆಜಿಲ್, ಚೀನಾ ಹಾಗೂ ದಕ್ಷಿಣ ಆಫ್ರಿಕಾ ದೇಶಗಳ ಪ್ರತಿನಿಧಿಗಳು ಪಾಲ್ಗೊಳ್ಳುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com