ಹನಿ ಟ್ರ್ಯಾಪ್ ಆರೋಪ ಸತ್ಯಕ್ಕೆ ದೂರವಾದದ್ದು: ವರುಣ್ ಗಾಂಧಿ

ಹನಿಟ್ರ್ಯಾಪ್ ಆರೋಪ ಸತ್ಯಕ್ಕೆ ದೂರವಾದದ್ದು, ಇಂತಹ ಹಾಸ್ಯಾಸ್ಪದ ಮತ್ತು ಅಸಂಬದ್ಧ ಆರೋಪಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿದ್ದಾರೆ.
ಬಿಜೆಪಿ ಸಂಸದ ವರುಣ್ ಗಾಂಧಿ (ಸಂಗ್ರಹ ಚಿತ್ರ)
ಬಿಜೆಪಿ ಸಂಸದ ವರುಣ್ ಗಾಂಧಿ (ಸಂಗ್ರಹ ಚಿತ್ರ)

ನವದೆಹಲಿ: ಹನಿಟ್ರ್ಯಾಪ್ ಆರೋಪ ಸತ್ಯಕ್ಕೆ ದೂರವಾದದ್ದು, ಇಂತಹ ಹಾಸ್ಯಾಸ್ಪದ ಮತ್ತು ಅಸಂಬದ್ಧ ಆರೋಪಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿದ್ದಾರೆ.

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಅಮೂಲ್ಯ ಮಾಹಿತಿಗಳನ್ನು ಹನಿಟ್ರ್ಯಾಪ್ ಗೆ ಒಳಗಾಗಿ ವಿದೇಶಕ್ಕೆ ರವಾನೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ  ವರುಣ್ ಗಾಂಧಿ, ಅಮೆರಿಕದ ಮಾಹಿತಿ ಹಕ್ಕುದಾರ ಎಡ್ಮಂಡ್ಸ್ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾದದ್ದು. ರಕ್ಷಣಾ  ಮಾಹಿತಿಯನ್ನು ಕಳವು ಮಾಡಿ ವಿದೇಶಕ್ಕೆ ರವಾನಿಸಿದ್ದೇನೆ ಎಂಬ ಕುರಿತು ಸಾಕ್ಷ್ಯಾಧಾರಗಳಿದ್ದರೆ ನೀಡಿ ಎಂದು ವರುಣ್ ಗಾಂಧಿ ಬಹಿರಂಗ ಸವಾಲು ಹಾಕಿದ್ದಾರೆ.

"ಆರೋಪಕ್ಕೆ ಸಂಬಂಧಿಸಿದಂತೆ ನಿಮ್ಮ ಬಳಿ ಏನಾದರೂ ಸಾಕ್ಷಿಗಳಿವೆಯೇ? ಇಂತಹ ಇಲ್ಲಸಲ್ಲದ ಆರೋಪಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅಂತೆಯೇ ಪತ್ರದಲ್ಲಿ  ಎಡ್ಮಂಡ್ಸ್ ಆರೋಪಿಸಿರುವಂತೆ ನಾನು ಯಾವುದೇ ಶಸ್ತ್ರಾಸ್ತ್ರದಲ್ಲಾಳಿಯನ್ನು ಭೇಟಿ ಮಾಡಿಲ್ಲ. ರಕ್ಷಣಾ ಸ್ಥಾಯಿ ಸಮಿತಿಯ ಮಾಹಿತಿಯನ್ನೂ ನೀಡಿಲ್ಲ ಎಂದು ವರುಣ್ ಗಾಂಧಿ ತಮ್ಮ ವಿರುದ್ಧದ ಎಲ್ಲ  ಆರೋಪಗಳನ್ನು ನಿರಾಕರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com