ಸಂಧಾನ ಸಭೆಗೆ ಹಾಜರಾಗಲು ಕೊನೆಗೂ ಗೋವಾ ಸಿಎಂ ಪರ್ಸೇಕರ್ ಒಪ್ಪಿಗೆ!

ಮಹದಾಯಿ ಜಲ ವಿವಾದಕ್ಕೆ ಸಂಬಂಧಿಸಿದ ಸಂಧಾನ ಸಭೆಗೆ ಹಾಜರಾಗಲು ಕೊನೆಗೂ ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ಒಪ್ಪಿಗೆ ನೀಡಿದ್ದು, ಶುಕ್ರವಾರ ನಡೆಯಬೇಕಿದ್ದ ಸಂಧಾನ ಸಭೆಯನ್ನು ನವೆಂಬರ್ 3ಕ್ಕೆ ಮುಂದೂಡಲಾಗಿದೆ.
ಗೋವಾ ಸಿಎಂ ಪರ್ಸೇಕರ್ ಹಾಗೂ ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಗೋವಾ ಸಿಎಂ ಪರ್ಸೇಕರ್ ಹಾಗೂ ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)

ಪಣಜಿ: ಮಹದಾಯಿ ಜಲ ವಿವಾದಕ್ಕೆ ಸಂಬಂಧಿಸಿದ ಸಂಧಾನ ಸಭೆಗೆ ಹಾಜರಾಗಲು ಕೊನೆಗೂ ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ಒಪ್ಪಿಗೆ ನೀಡಿದ್ದು, ಶುಕ್ರವಾರ ನಡೆಯಬೇಕಿದ್ದ ಸಂಧಾನ ಸಭೆಯನ್ನು ನವೆಂಬರ್ 3ಕ್ಕೆ ಮುಂದೂಡಲಾಗಿದೆ.

ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರ ನೇತೃತ್ವದಲ್ಲಿ ಇಂದು ಮುಂಬೈನಲ್ಲಿ ನಡೆಯಬೇಕಿದ್ದ ಸಂಧಾನ ಸಭೆ ಲಕ್ಷ್ಮೀಕಾಂತ್ ಅವರ ಗೈರು ಹಾಜರಿಯಿಂದಾಗಿ ರದ್ದಾಗಿದ್ದು, ಈ ಬಗ್ಗೆ ನಿನ್ನೆ  ಸ್ವತಃ ಲಕ್ಷ್ಮೀಕಾಂತ್ ಅವರು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರಿಗೆ ಪತ್ರವೊಂದನ್ನು ಬರೆದು ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಅಕ್ಟೋಬರ್ 21ರಂದು  ತಾವು ಸಾಕಷ್ಟು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದು, ಅಂದು ನಾವು ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಭೆಯನ್ನು ಬೇರೆ ದಿನಾಂಕಕ್ಕೆ ಮುಂದೂಡಿ ಎಂದು ಹೇಳಿದ್ದಾರೆ.

ಹೀಗಾಗಿ ಇಂದು ನಡೆಯಬೇಕಿದ್ದ ಸಂಧಾನ ಸಭೆಯನ್ನು ರದ್ದು ಮಾಡುವ ಬದಲು ಸಭೆಯನ್ನು ಇದೇ ನವೆಂಬರ್ 3ಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ವಾಣಿಜ್ಯ ನಗರಿ ಮುಂಬೈನಲ್ಲೇ  ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಿವಿಸ್ ಅವರ ನೇತೃತ್ವದಲ್ಲಿ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯದ ಸಿಎಂ ಗಳು ಹಾಗೂ ನೀರಾವರಿ ತಜ್ಞರು ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com