ಜಯಾ ಆರೋಗ್ಯದ ಬಗ್ಗೆ ವದಂತಿ, ಟ್ರಾಫಿಕ್ ರಾಮಸ್ವಾಮಿ ವಿರುದ್ಧ ಕೇಸ್ ದಾಖಲು

ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯದ ಬಗ್ಗೆ ಸುಳ್ಳು ವದಂತಿ ಹಬ್ಬಿಸುತ್ತಿರುವ ಆರೋಪದ ಮೇಲೆ...
ಟ್ರಾಫಿಕ್ ರಾಮಸ್ವಾಮಿ
ಟ್ರಾಫಿಕ್ ರಾಮಸ್ವಾಮಿ
Updated on: 
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯದ ಬಗ್ಗೆ ಸುಳ್ಳು ವದಂತಿ ಹಬ್ಬಿಸುತ್ತಿರುವ ಆರೋಪದ ಮೇಲೆ ಸಾಮಾಜಿಕ ಹೋರಾಟಗಾರ 'ಟ್ರಾಫಿಕ್‌' ಕೆ.ಆರ್ ರಾಮಸ್ವಾಮಿ ಅವರ ವಿರುದ್ಧ ಶುಕ್ರವಾರ ಕೇಸ್ ದಾಖಲಿಸಲಾಗಿದೆ.
ರಾಮಾಸ್ವಾಮಿ ಅವರು ಜಯಾ ಆರೋಗ್ಯಕ್ಕೆ ಸಂಬಂಧಿಸಿದ ವಿಡಿಯೋವನ್ನು ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ್ದು, ಇದು ಕೂಡಲೈ ವೈರಲ್ ಆಗಿತ್ತು, ಈ ಸಂಬಂಧ ತಮಿಳುನಾಡು ಕೇಂದ್ರ ಅಪರಾಧ ವಿಭಾಗದ ಪೊಲೀಸರು ರಾಮಸ್ವಾಮಿ ವಿರುದ್ಧ ಎರಡು ಎಫ್ ಆರ್ ದಾಖಲಿಸಿದ್ದಾರೆ.
ಕಳೆದ ಸೆಪ್ಟೆಂಬರ್ 22ರಿಂದ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಸಿಎಂ ಜಯಲಲಿತಾ ಅವರ ಆರೋಗ್ಯದ ಬಗ್ಗೆ ನೀಡುವಂತೆ ಟ್ರಾಫಿಕ್ ರಾಮಸ್ವಾಮಿ ಅವರು ಕೆಲವು ದಿನಗಳ ಹಿಂದೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿತ್ತು.
ಇದುವರೆಗೆ ಜಯಲಲಿತಾ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಸುಳ್ಳು ವದಂತಿ ಹಬ್ಬಿಸುತ್ತಿರುವ ಆರೋಪದ ಮೇಲೆ ಒಟ್ಟು 55 ಕೇಸ್ ಗಳನ್ನು ತಮಿಳುನಾಡು ಪೊಲೀಸರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com