ಬಾರಮುಲ್ಲಾದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ 24 ಗಂಟೆಗಳಲ್ಲಿ ಒಂದು ಪ್ರಾಥಮಿಕ ಶಾಲೆಗೆ ಹಾಗೂ ಎರಡು ವಾಹನಗಳಿಗೆ ಬೆಂಕಿ ಹಚ್ಚಿದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ 24 ಗಂಟೆಗಳಲ್ಲಿ ಒಂದು ಪ್ರಾಥಮಿಕ ಶಾಲೆಗೆ ಹಾಗೂ ಎರಡು ವಾಹನಗಳಿಗೆ ಬೆಂಕಿ ಹಚ್ಚಿದ ಎರಡು ಪ್ರತ್ಯೇಕ ಘಟನೆ ನಡೆದಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.
ಜುಲೈ 8ರಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಬುರ್ಹಾನ್ ವನಿ ಎನ್ ಕೌಂಟರ್ ನಂತರ ಕಾಶ್ಮೀರದಲ್ಲಿ ಬುಗಿಲೆದ್ದ ಹಿಂಸಾಚಾರದಲ್ಲಿ ಬೆಂಕಿಗಾಹುತಿಯಾಗುತ್ತಿರುವ 19 ಶಾಲೆ ಇದಾಗಿದೆ.
ಕಳೆದ ರಾತ್ರಿ ಕೆಲವು ದುಷ್ಕರ್ಮಿಗಳು ಬಾರಮುಲ್ಲಾ ಜಿಲ್ಲೆಯ ಪಠಣ್ ಪ್ರದೇಶದ ತಾಪರ್ ನ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸರ್ಕಾರಿ ಶಾಲೆಯ ಮೂರು ಕೋಣೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮತ್ತೊಂದು ಘಟನೆಯಲ್ಲಿ ಪ್ರತ್ಯೇಕವಾದಿಗಳು ಕರೆ ನೀಡಿದ್ದ ಬಂದ್ ಗೆ ಸಹಕರಿಸದ ಹಿನ್ನೆಲೆಯಲ್ಲಿ ರೈನವರಿಯಲ್ಲಿ ಒಂದು ಆಟೋ ಮತ್ತು ಪರಿಂಪೋರದಲ್ಲಿ ಒಂದು ಟ್ರಕ್ ಗೆ ಬೆಂಕಿ ಹಚ್ಚಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com