ದೆಹಲಿಯಲ್ಲಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
ಪ್ರಧಾನ ಸುದ್ದಿ
ಭಾರತ್ ಬಂದ್ ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ, ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭ
ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಗೆ ರಾಜ್ಯದಲ್ಲಿ...
ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಭಾರತ್ ಬಂದ್ ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕರ್ನಾಟಕದ ಹಲವೆಡೆ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ದೊರೆತಿದೆಯಾದರೂ, ಸರ್ಕಾರಿ ಬಸ್ ಸೇವೆಗಳು ಸ್ಥಗಿತಗೊಂಡ ಹಿನ್ನಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಗಿತ್ತು. ಆದರೆ ಈಗ ನಿಧಾನವಾಗಿ ಬಿಎಂಟಿಸಿ ಹಾಗೂ ಕೆಎಸ್ಆರ್ ಟಿ ಬಸ್ ಸಂಚಾರ ಆರಂಭಗೊಂಡಿದ್ದು, ಸಿಲಿಕಾನ್ ಸಿಟಿಯ ಜನಜೀವನ ಯತಾಸ್ಥಿತಿಗೆ ಮರಳುತ್ತಿದೆ.
ಶಿವಾಜಿನಗರದಿಂದ ಹಲವು ಬಿಎಂಟಿಸಿ ಬಸ್ ಗಳ ಸಂಚಾರ ಆರಂಭಗೊಂಡಿದ್ದು, ಸಿಟಿ ಮಾರ್ಕೆಟ್, ಮೆಜಸ್ಟಿಕ್ ಹಾಗೂ ಕೆಂಗೇರಿ ಸೇರಿದಂತೆ ವಿವಿಧ ಮಾರ್ಗಗಳಲ್ಲಿ ಬಸ್ ಗಳು ಸಂಚರಿಸುತ್ತಿವೆ.
ತುಮಕೂರು, ಯಾದಗಿರಿ, ಕೋಲಾರ, ಚಿಕ್ಕಮಗಳೂರು, ಪುತ್ತೂರು ಜಿಲ್ಲೆಗಳಲ್ಲಿ ಬಂದ್ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರದಲ್ಲಿ ಅಲ್ಪ ಪ್ರಮಾಣದ ಬಸ್ ಗಳು ಸಂಚಾರ ಆರಂಭಿಸಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ