ಕಾವೇರಿ ತೀರ್ಪು: ತಮಿಳುನಾಡಿನಲ್ಲಿ ರಾಜಹಂಸ ಬಸ್‌ ಮೇಲೆ ಕಲ್ಲು ತೂರಾಟ

ತಮಿಳುನಾಡಿನ ತಂಜಾವೂರಿನಲ್ಲಿ ಕೆಎಸ್ಆರ್ಟಿಸಿ ರಾಜಹಂಸ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.
ರಾಜಹಂಸ ಬಸ್
ರಾಜಹಂಸ ಬಸ್

ತಂಜಾವೂರು/ಬೆಂಗಳೂರು: ತಮಿಳುನಾಡಿನ ತಂಜಾವೂರಿನಲ್ಲಿ ಕೆಎಸ್ಆರ್ಟಿಸಿ ರಾಜಹಂಸ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.

ತಮಿಳುನಾಡಿಗೆ ನೀರು ಬಿಡಬೇಕೆಂಬ ಸುಪ್ರೀಂಕೋರ್ಟ್ ನೀಡಿರುವ ಆದೇಶ ಹೊರಬಿದ್ದ ನಂತರ ಬಸ್ ಗೆ ಕಲ್ಲು ತೂರಿದ್ದಾರೆ. ಬಸ್ ನ ಮುಂಭಾಗದ ಗಾಜು ಪುಡಿ ಪುಡಿಯಾಗಿದ್ದು, ಬಸ್ ನಲ್ಲಿದ್ದವರಿಗೆ ಯಾವುದೇ ತೊಂದರೆಯಾಗಿಲ್ಲ. ಕಿಡಿಗೇಡಿಗಳು ಬಸ್ ಗೆ ಕಲ್ಲು ತೂರಿದ ನಂತರ ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿಗೆ ತಂಜಾವೂರಿನಿಂದ ಬರುತ್ತಿದ್ದ ಬಸ್ ಮೇಲೆ ಬೆಳಗ್ಗೆ 6.30ರ ಸುಮಾರಿನಲ್ಲಿ ದುಷ್ಕರ್ಮಿಗಳು ಬಸ್ ಮೇಲೆ ಕಲ್ಲು ತೂರಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಮಿಳುನಾಡಿಗೆ ನೀರು ಬಿಡುಬೇಕೆಂದು ಸುಪ್ರೀಂಕೋರ್ಟ್ ಆದೇಶ ನಂತರ ಮಂಡ್ಯದಲ್ಲಿ ಪ್ರತಿಭಟನೆ ಕಾವೇರಿದೆ. ಇದರಿಂದಾಗಿ ಮೈಸೂರಿನಿಂದ ತಮಿಳುನಾಡಿಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com