ಕರ್ನಾಟಕ ಬಂದ್: ಶಾಲಾ, ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ 'ರಜೆ' ಘೋಷಿಸಿದ ಸಿಎಂ

ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ಶುಕ್ರವಾರ ವಿವಿಧ ಕನ್ನಡಪರ ಸಂಘಟನೆಗಳು....
ಪತ್ರಿಕಾಗೋಷ್ಠಿಯಲ್ಲಿ ಸಿಎಂ
ಪತ್ರಿಕಾಗೋಷ್ಠಿಯಲ್ಲಿ ಸಿಎಂ
Updated on
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶ ವಿರೋಧಿಸಿ ಶುಕ್ರವಾರ ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಈ ಬಂದ್ ಗೆ ರಾಜ್ಯ ಸರ್ಕಾರವೇ ಪರೋಕ್ಷ ಬೆಂಬಲ ನೀಡಿದೆ.
ಹೌದು, ಈ ಸಂಬಂಧ ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,  ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಿದ್ದಾರೆ. 
ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಕಚೇರಿಗಳಲ್ಲೂ ಶುಕ್ರವಾರ ಅಟೆಂಡೆನ್ಸ್‌ ಇರುವುದಿಲ್ಲ ಎಂದು ಹೇಳುವ ಮೂಲಕ ಸಿಎಂ ಪರೋಕ್ಷವಾಗಿ ಸರ್ಕಾರಿ ಕಚೇರಿಗಳಿಗೂ ರಜೆ ಘೋಷಿಸಿದರು. 
ಜನರು ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು ಎಂದು ಕರೆ ನೀಡಿದ ಸಿಎಂ ಕರ್ನಾಟಕ ಬಂದ್ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಹೊರರಾಜ್ಯಗಳಿಂದಲೂ ಪೊಲೀಸ್ ಪಡೆಗಳನ್ನು ಕರೆಸಿಕೊಳ್ಳಲಾಗುತ್ತಿದೆ. ಬಂದ್ ಹೆಸರಿನಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಮಾಡಬಾರದು ಎಂದು ಎಚ್ಚರಿಸಿದರು. ಅಲ್ಲದೆ ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಂದ್ ವೇಳೆ ಸಾರ್ವಜನಿಕರು ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾಗಿ ವಿನಂತಿ. ನಮಗಾದ ಅನ್ಯಾಯಕ್ಕೆ ನಮ್ಮದೇ ಆಸ್ತಿಪಾಸ್ತಿಗಳ ಹಾನಿ ಬೇಡ. ಬಂದ್ ಶಾಂತಿಯುತವಾಗಿರಲಿ ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com