ನವದೆಹಲಿ: ಉಚ್ಛಾಟಿತ ಎಎಪಿ ಮಾಜಿ ಸಚಿವ ಸಂದೀಪ್ ಕುಮಾರ್ ಅವರನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಅವರ ಜೊತೆಗೆ ವಿಡಿಯೋದಲ್ಲಿ ಕಂಡುಬಂದಿದ್ದ ಮಹಿಳೆ ದೂರು ನೀಡಿದ್ದ ಪ್ರಕರಣದಲ್ಲಿ ಸಂದೀಪ್ ಅವರನ್ನು ಬಂಧಿಸಲಾಗಿತ್ತು.
ಪೊಲೀಸ್ ಬಂಧನ ಅವಧಿ ಮುಗಿದಿದ್ದರಿಂದ ಸಂದೀಪ್ ಅವರನ್ನು ವಿಶೇಷ ನ್ಯಾಯಾಧೀಶರಾದ ಪೂನಂ ಚೌಧರಿ ಮುಂದೆ ಹಾಜರು ಪಡಿಸಿದ ನಂತರ, ನ್ಯಾಯಾಂಗ ಬಂಧನ ಅವಧಿಯನ್ನು ಸೆಪ್ಟೆಂಬರ್ 23 ರವರೆಗೆ ವಿಸ್ತರಿಸಲಾಗಿದೆ.
ಆರೋಪಿಯನ್ನು ಇನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕು ಎಂದು ಪೊಲೀಸರು ಹೇಳಿದ್ದಾರೆ.
ತಮ್ಮ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ದೂರಿದ್ದಕ್ಕೆ ಸುಲ್ತಾನಪುರಿ ಪೊಲೀಸರು ಶನಿವಾರ ದೆಹಲಿಯ ಮಾಜಿ ಸಾಮಾಜಿಕ ಅಭಿವೃದ್ಧಿ ಹಾಗು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವನನ್ನು ಬಂಧಿಸಿದ್ದರು.
ಐಪಿಸಿ ಸೆಕ್ಷನ್ 376 (ರೇಪ್) ಮತ್ತು 328 ರಡಿ ಸಂದೀಪ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.