ನವದೆಹಲಿ: ದೆಹಲಿ ಸರ್ಕಾರದ ಎಲ್ಲಾ ನಿರ್ಧಾರಗಳಿಗೂ ಲೆಫ್ಟಿನೆಂಟ್ ಗವರ್ನರ್ ಅವರೇ ಆಡಳಿತ ಅಧಿಕಾರಿ ಎಂದು ದೆಹಲಿ ಹೈಕೋರ್ಟ್ ನೀಡಿದ ಆದೇಶವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿರುವ ಹಿನ್ನಲೆಯಲ್ಲಿ, ಇದಕ್ಕೆ ಪ್ರತಿಕ್ರಿಯೆ ಕೋರಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.