ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕವಾದಿ ಸಂಘಟನೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಣ ನೀಡುತ್ತಿದೆ ಎಂದು ಆರೋಪಿಸಿ ಅದನ್ನು ತಡೆಯಲು ಆದೇಶಿಸುವಂತೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ಮಾಡಲು ಬುಧವಾರ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೋರ್ಟ್ ಗಳು ಇಂತಹ ವಿಷಯಗಳಿಂದ ದೂರ ಉಳಿಯುವುದು ಸರಿ ಎಂದು ತಿಳಿಸಿದೆ.