
ಚೆನ್ನೈ: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ರೈತರು ಮತ್ತು ವ್ಯಾಪಾರಿಗಳು ಕರೆ ನೀಡಿರುವ ರಾಜ್ಯ ಬಂದ್ ಗೆ ತಮಿಳುನಾಡು ಕಾಂಗ್ರೆಸ್ ಘಟಕ ಹಾಗೂ ತರಕಾರಿ, ಹಾಲು ವ್ಯಾಪಾರಿಗಳು ಬೆಂಬಲ ನೀಡಿದ್ದಾರೆ.
ನಿನ್ನೆಯಷ್ಟೇ ತಮಿಳುನಾಡು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಸು ತಿರುನಾವುಕ್ಕರಸರ್ ಅವರು ರಾಜ್ಯ ಬಂದ್ ಗೆ ಪಕ್ಷದ ಬೆಂಬಲ ಘೋಷಿಸಿದ್ದು, ನಾಳಿನ ಬಂದ್ ನಲ್ಲಿ ಭಾಗವಹಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಅಲ್ಲದೆ ತಮಿಳುನಾಡು ಬಂದ್ ಅನ್ನು ಯಶಸ್ವಿಗೊಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಇನ್ನು ರಾಜ್ಯಾದ್ಯಂತ ತರಕಾರಿ ವ್ಯಾಪಾರಿಗಳು ಹಾಗೂ ಹಾಲು ಮಾರಾಟಗಾರರು ಸಹ ನಾಳೆ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.
ಕರ್ನಾಟಕದಲ್ಲಿಸ ತಮಿಳರನ್ನು ಗುರಿಯಾಗಿಸಿಕೊಂಡು ಹಿಂಸಾಚಾರ ನಡೆಸುತ್ತಿರುವುದನ್ನು ವಿರೋಧಿಸಿ ಹಾಗೂ ಕಾವೇರಿ ವಿವಾದಕ್ಕೆ ಶಾಸ್ವತ ಪರಿಹಾರಕ್ಕೆ ಒತ್ತಾಯಿಸಿ ರೈತಪರ ಸಂಘಟನೆಗಳು ಹಾಗೂ ವ್ಯಾಪಾರಿಗಳು ನಾಳೆ ತಮಿಳುನಾಡು ಬಂದ್ ಗೆ ಕರೆ ನೀಡಿವೆ.
Advertisement