ನವದೆಹಲಿ: ಅಕ್ರಮ ಗಣಿಗಾರಿಕೆಯ ಸುಳಿಯಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ ಹಾಗೂ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ವಹಿಸುವಂತೆ ಸೋಮವಾರ ಸುಪ್ರೀಂಕೋರ್ಟ್ ಆದೇಶಿಸಿದೆ.
ತಮ್ಮ ವಿರುದ್ಧದ ಅಕ್ರಮ ಗಣಿಗಾರಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಎಸ್.ಕೃಷ್ಣ ಹಾಗೂ ಕುಮಾರಸ್ವಾಮಿ ಅವರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಪೀಠ, ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸುವಂತೆ ಸೂಚನೆ ನೀಡಿದೆ.
2012ರಲ್ಲಿ ಮಾಜಿ ಸಿಎಂಗಳ ವಿರುದ್ಧದ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ತಡೆ ನೀಡಿದ್ದರಿಂದ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.