ವಿಜಯವಾಡ: 47 ಪ್ರಯಾಣಿಕರನ್ನು ಹೊತ್ತ ಬಸ್ ಒಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಪ್ರವಾಹದಲ್ಲಿ ಸಿಲುಕಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.
ಆಂಧ್ರಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಬಸ್ ವುಟುಕುರು ಗ್ರಾಮದಲ್ಲಿ ಸಿಕ್ಕಿಹಾಕಿಕೊಂಡಿದೆ ಎಂದು ಅವರು ಹೇಳಿದ್ದಾರೆ.
ನೀರಿನ ಮಟ್ಟ ಏರಿದಂತೆ ಕೆಲವು ಪ್ರಯಾಣಿಕರು ಬಸ್ ಮೇಲೆ ಏರಿ ಕುಳಿತು ಸಹಾಯಕ್ಕಾಗಿ ಕಾದು ಕುಳಿತಿದ್ದಾರೆ. ಪ್ರವಾಹ ತೀವ್ರವಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆ ಅಲ್ಲಿಗೆ ತಲುಪಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಕ್ಷಣೆಗಾಗಿ ಅಲ್ಲಿಗೆ ಹೆಲಿಕ್ಯಾಪ್ಟರ್ ಕಳುಹಿಸಲು ಜಿಲ್ಲಾಧಿಕಾರಿ ಕಾಂತಿಲಾಲ್ ದಂಡೆ ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿಗಳ ಮೂಲಗಳು ತಿಳಿಸಿವೆ.
ಬುಧವಾರದಿಂದಲಿ ಗುಂಟೂರು ಸೇರಿದಂತೆ ಆಂಧ್ರಪ್ರದೇಶದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಪ್ರವಾಹ ಭೀತಿ ಸೃಷ್ಟಿಸಿದೆ.