ಕಾವೇರಿ ವಿವಾದ: ಸುಪ್ರೀಂ ಕೋರ್ಟ್‌ನಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಉಮಾ ಭಾರತಿಗೆ ಸಿಎಂ ಮನವಿ

ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ...
ಉಮಾ ಭಾರತಿಯೊಂದಿಗೆ ಸಿಎಂ ಹಾಗೂ ಸಚಿವರು
ಉಮಾ ಭಾರತಿಯೊಂದಿಗೆ ಸಿಎಂ ಹಾಗೂ ಸಚಿವರು
ನವದೆಹಲಿ: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಅವರಿಗೆ ಮನವಿ ಮಾಡಿದ್ದಾರೆ.
ಇಂದು ಶ್ರಮಶಕ್ತಿ ಭವನದಲ್ಲಿ ಉಮಾ ಭಾರತಿ ಅವರನ್ನು ಭೇಟಿ ಮಾಡಿದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಾವೇರಿ ನದಿ ನೀರು ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಉಮಾ ಭಾರತಿ ಅವರೊಂದಿಗೆ ಚರ್ಚಿಸಿದ್ದೇವೆ. ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಮನವಿ ಮಾಡಿದ್ದೇನೆ. ಅವರು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಸುಪ್ರೀಂ ಕೋರ್ಟ್ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಹೇಳಿದೆ. ಆದರೆ ಕರ್ನಾಟಕವಾಗಲಿ, ತಮಿಳುನಾಡು ಸರ್ಕಾರವಾಗಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಕೇಳಿಕೊಂಡಿರಲಿಲ್ಲ ಎಂದು ಸಿಎಂ ವಿವರಿಸಿದ್ದಾರೆ. ಅಲ್ಲದೆ ಸೆಪ್ಟೆಂಬರ್ 27ಕ್ಕೆ ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರವೇ ಆಕ್ಷೇಪಣೆ ಸಲ್ಲಿಸಲಿ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸುವುದಾಗಿ ಸಚಿವೆ ಉಮಾಭಾರತಿ ಅವರು ಸಿಎಂಗೆ ಶ್ರಮಶಕ್ತಿ ಭವನದಲ್ಲಿ ನಡೆದ ಮಾತುಕತೆಯಲ್ಲಿ ಭರವಸೆ ನೀಡಿರುವುದಾಗಿ ಟಿವಿ9 ವರದಿ ಮಾಡಿದೆ.
ತಮಿಳುನಾಡು ಸರ್ಕಾರ ಬೆಳೆಗಾಗಿ ನೀರು ಕೇಳುತ್ತಿದೆ. ಆದರೆ, ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಅಭಾವವಿದೆ. ನಮಗೆ ಕುಡಿಯಲು 27 ಟಿಎಂಸಿ ನೀರು ಬೇಕಾಗುತ್ತದೆ. ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿತ್ತು. ಆದರೆ, ಅವರ ಭೇಟಿಗೆ ಅವಕಾಶ ದೊರೆತಿಲ್ಲ ಎಂದು ತಿಳಿಸಿದರು. 
ಮುಖ್ಯಮಂತ್ರಿ ಸಿದ್ದರಾಮಯ್ಯನ ಅರಿಗೆ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಕಾನೂನು ಸಚಿವ ಟಿ.ಬಿ.ಜಯಚಂದ್ರ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸಾಥ್ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com