ಕಾವೇರಿ ನೀರು ಕುಡಿಯಲು ಮಾತ್ರ ಬಳಕೆ: ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕಾರ

ಕಾವೇರಿಕೊಳ್ಳದ ಜಲಾಶಗಳ ನೀರು ಕುಡಿಯಲು ಮಾತ್ರ ಬಳಸುವುದಾಗಿ ಶುಕ್ರವಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ...
ವಿಧಾನಸಭೆಯಲ್ಲಿ ಸಿಎಂ
ವಿಧಾನಸಭೆಯಲ್ಲಿ ಸಿಎಂ
Updated on: 
ಬೆಂಗಳೂರು: ಕಾವೇರಿಕೊಳ್ಳದ ಜಲಾಶಗಳ ನೀರು ಕುಡಿಯಲು ಮಾತ್ರ ಬಳಸುವುದಾಗಿ ಶುಕ್ರವಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿದೆ.
ಕಾವೇರಿ ವಿವಾದ ಸಂಬಂಧ ರಾಜ್ಯ ಸರ್ಕಾರ ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಕಾವೇರಿ ಕೊಳ್ಳದ ಜಲಾಶಯಗಳ ನೀರು ಕುಡಿಯಲು ಮಾತ್ರ ಬಳಸಲಾಗುವುದು. ಕುಡಿಯುವ ನೀರಿಗೆ ಹೊರತುಪಡಿಸಿ ಬೇರೆ ಉದ್ದೇಶಕ್ಕೆ ನೀರು ಬಿಡಲ್ಲ ಎಂಬ ನಿರ್ಣಯವನ್ನು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಮಂಡಿಸಿದ್ದರು.
ನಿರ್ಣಯದ ಮೇಲೆ ಸುದೀರ್ಘ ಚರ್ಚೆ ನಡೆದ ಬಳಿಕ ಸದನದ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ ಎಂದು ಸ್ಪೀಕರ್ ಕೆ.ಬಿ.ಕೋಳಿವಾಡ್ ಅವರು ಪ್ರಕಟಿಸಿದರು, 
ಕಾವೇರಿ ಕೊಳ್ಳದ 4 ಜಲಾಶಯಗಳಾದ ಕೆಆರ್‍ಎಸ್, ಹೇಮಾವತಿ, ಹಾರಂಗಿ, ಕಬಿನಿಯಲ್ಲಿ ನೀರಿನ ಮಟ್ಟ ಅಂತ್ಯಂತ ತಳಮಟ್ಟದ ಹಂತಕ್ಕೆ ತಲುಪಿರುವುದನ್ನು ಮತ್ತು ಕೇವಲ 27.6 ಟಿಎಂಸಿ ಮಾತ್ರ ನೀರು ಇರುವುದನ್ನು ಸದನ ಆತಂಕದಿಂದ ಪರಿಗಣಿಸಿದೆ.
ಈ ಗಂಭೀರ ಮತ್ತು ಆತಂಕಕಾರಿ ವಾಸ್ತವ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿನ ಪಟ್ಟಣಗಳು ಹಾಗೂ ಹಳ್ಳಿಗಳ ಕುಡಿಯುವ ನೀರಿನ ಅವಶ್ಯಕತೆಗಾಗಿ ಮಾತ್ರ ಈಗಿರುವ 4 ಜಲಾಶಯಗಳ ಒಟ್ಟಾರೆ ಜಲಸಂಗ್ರಹಣೆಯಿಂದ ನೀರನ್ನು ಬಳಸಬೇಕೆಂದು ಸರ್ಕಾರಕ್ಕೆ ಈ ಸದನವು ನಿರ್ಣಯದ ಮೂಲಕ ನಿರ್ದೇಶಿಸುತ್ತದೆ.
ಹಾಗಾಗಿ ಕರ್ನಾಟಕ ರಾಜ್ಯದಲ್ಲಿ ವಾಸವಾಗಿರುವ ಜನರ ಹಿತಾಸಕ್ತಿ ಪರಿಗಣಿಸಿ ಕಾವೇರಿ ಕೊಳ್ಳದ 4 ಜಲಾಶಯಗಳಲ್ಲಿ ಹಾಲಿ ಇರುವ ಒಟ್ಟಾರೆ ಜಲಸಂಗ್ರಹಣೆಯಾಗಿರುವ ನೀರನ್ನು ಬೆಂಗಳೂರು ಮಹಾನಗರವೂ ಸೇರಿದಂತೆ ಕಾವೇರಿ ಕೊಳ್ಳದ ಜನರಿಗೆ ಮೂಲಭೂತ ಅಗತ್ಯವಾದ ಕುಡಿಯುವ ನೀರನ್ನು ಒದಗಿಸುವ ಉದ್ದೇಶಕ್ಕಾಗಿ ಹಾಗೆಯೇ ಸಂಪೂರ್ಣವಾಗಿ ಉಳಿಸಿಕೊಳ್ಳಲು ಇದಕ್ಕೆ ಹೊರತಾಗಿ ಬೇರೆ ಯಾವುದೇ ಕಾರಣಕ್ಕೂ ಒದಗಿಸಲು ಸಾಧ್ಯವಿಲ್ಲ ಎಂಬ ನಿರ್ಣಯವನ್ನು ಈ ಸದನವು ಸರ್ವಾನುಮತದಿಂದ ಕೈಗೊಂಡಿದೆ.
ನಿರ್ಣಯದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಕರ್ನಾಟಕಕ್ಕೆ ಅಪಾರವಾದ ಗೌರವವಿದೆ. ಆದರೆ ರಾಜ್ಯದ ಜನರ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com