ಡಿಸೆಂಬರ್ ಅಂತ್ಯದವರೆಗೂ ತ.ನಾಡಿಗೆ "ಕಾವೇರಿ" ನೀರು ಬಿಡಲು ಸಾಧ್ಯವಿಲ್ಲ: ಸುಪ್ರೀಂ ಗೆ ಕರ್ನಾಟಕ
ಡಿಸೆಂಬರ್ ಅಂತ್ಯದವರೆಗೂ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸುಪ್ರೀಂ ಕೋರ್ಟ್ ಗೆ ಸೋಮವಾರ ಹೇಳಿದೆ.

ನವದೆಹಲಿ: ಡಿಸೆಂಬರ್ ಅಂತ್ಯದವರೆಗೂ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸುಪ್ರೀಂ ಕೋರ್ಟ್ ಗೆ ಸೋಮವಾರ ಹೇಳಿದೆ.
ಕಳೆದ ಸೆಪ್ಚೆಂಬರ್ 20ರಂದು ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ನೀಡಿದ್ದ ಆದೇಶವನ್ನು ಕರ್ನಾಟಕ ಪಾಲಿಸುತ್ತಿಲ್ಲ ಎಂದು ತಮಿಳುನಾಡು ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆಯುತ್ತಿದ್ದು, ವಿಚಾರಣೆಯಲ್ಲಿ ಕರ್ನಾಟಕ ಡಿಸೆಂಬರ್ ಅಂತ್ಯದವೆರಗೂ ನೀರು ಬಿಡಲು ಸಾಧ್ಯವಿಲ್ಲ ಎಂದು ತನ್ನ ವಾದ ಮಂಡಿಸಿದೆ. "ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ತೀವ್ರ ಅಭಾವವಿದೆ. ಪ್ರಸ್ತುತ ಜಲಾಶಯಗಳಲ್ಲಿರುವ ನೀರನ್ನು ತಮಿಳುನಾಡಿಗೆ ಹರಿಸಿದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತದೆ. ಹೀಗಾಗಿ ಡಿಸೆಂಬರ್ ಅಂತ್ಯದ ಬಳಿಕವಷ್ಟೇ ತಮಿಳುನಾಡಿಗೆ ನೀರು ಬಿಡಲು ಸಾಧ್ಯ" ಎಂದು ಹೇಳಿದೆ.
ಇದೇ ವೇಳೆ ಕಳೆದ ಸೆಪ್ಟೆಂಬರ್ 20ರಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಪರಿಷ್ಕರಿಸುವಂತೆ ಕರ್ನಾಟಕ ಇಂದು ಸುಪ್ರೀಂ ಕೋರ್ಟ್ ನಲ್ಲಿ ಮತ್ತೊಂದು ಅರ್ಜಿ ಸಲ್ಲಿಸಲಿದ್ದು, ಅದರ ವಿಚಾರಣೆಯನ್ನೂ ಕೂಡ ನ್ಯಾಯಾಲಯ ಕೈಗೆತ್ತಿಕೊಳ್ಳಲಿದೆ.
ಜನವರಿ ಬಳಿಕವೇ ನೀರಿನ ಲೆಕ್ಕಾಚಾರ ಮಾಡಿ: ರಾಜ್ಯದ ಪರ ವಕೀಲರ ವಾದ
ಇನ್ನು ಕಾವೇರಿ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ಈ ವರೆಗೂ 3 ಮಧ್ಯಂತರ ಆದೇಶಗಳನ್ನು ನೀಡಿದ್ದು, ಈ ಮೂರು ಆದೇಶಗಳ ಅನ್ವಯ ಕರ್ನಾಟಕ ತಮಿಳುನಾಡಿಗೆ ಎಷ್ಟು ಪ್ರಮಾಣದ ನೀರು ಹರಿಸಿದೆ ಎಂಬ ಲೆಕ್ಕಾಚಾರ ಮಾಡಬೇಕಿದೆ. ಈ ಹಿಂದೆ 52 ಟಿಎಂಸಿ ನೀರನ್ನು ಬಿಡುವಂತೆ ತಮಿಳುನಾಡು ಕೋರಿದೆಯಾದರೂ, ಈ ಸಂಬಂಧ ಸುಪ್ರೀಂ ಕೋರ್ಟ್ 3 ಮಧ್ಯಂತರ ಆದೇಶಗಳನ್ನು ಹೊರಡಿಸಿದೆ. ಹೀಗಾಗಿ ಈ ಆದೇಶಗಳ ಬಳಿಕ ಕರ್ನಾಟಕ ಹರಿಸಿದ ನೀರಿನ ಪ್ರಮಾಣದ ಲೆಕ್ಕಾಚಾರ ಬಿಳಿಗುಂಡ್ಲುವಿನ ಮಾಪನದಲ್ಲಿ ಇಂದು ನಡೆಯುವ ಸಾಧ್ಯತೆ ಇದೆ. ಸೆಪ್ಟೆಂಬರ್ 20ರಂದು ಕೋರ್ಟ್ ವಿಚಾರಣೆ ವೇಳೆ ಸಂಕಷ್ಟ ಸೂತ್ರದ ಲೆಕ್ಕಾಚಾರದಂತೆ ಇನ್ನೂ 2.56 ಟಿಎಂಸಿ ನೀರನ್ನು ಬಿಡಬೇಕು ಎಂದು ತಮಿಳುನಾಡು ವಾದಿಸಿದ್ದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಕರ್ನಾಟಕದ ಪರ ವಕೀಲರು ನೀರಿನ ಲೆಕ್ಕಾಚಾರವನ್ನು ಜನವರಿ ಅಂತ್ಯದ ಬಳಿಕವೇ ಮಾಡಬೇಕು ಎಂದು ತಮ್ಮ ವಾದ ಮಂಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


