ಪ್ರಧಾನ ಸುದ್ದಿ

ಸೆ.20ರ ಆದೇಶ ಪರಿಷ್ಕರಣೆ ಕೋರಿ ಕರ್ನಾಟಕ ಮನವಿ; ನಾಳೆ ಕರ್ನಾಟಕದ ಅರ್ಜಿ ವಿಚಾರಣೆ

ಸೆಪ್ಟೆಂಬರ್ 20ರ ಆದೇಶವನ್ನು ಪರಿಷ್ಕರಿಸುವಂತೆ ಕೋರಿ ಕರ್ನಾಟಕ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮಂಗಳವಾರ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಸೆ.20ರ ಆದೇಶ ಪರಿಷ್ಕರಣೆ ಕೋರಿ ಕರ್ನಾಟಕ ಮನವಿ; ನಾಳೆ ಕರ್ನಾಟಕದ ಅರ್ಜಿ ವಿಚಾರಣೆ
ಸುಪ್ರೀಂ ಕೋರ್ಟ್ (ಸಂಗ್ರಹ ಚಿತ್ರ)
Published On :

ನವದೆಹಲಿ: ಸೆಪ್ಟೆಂಬರ್ 20ರ ಆದೇಶವನ್ನು ಪರಿಷ್ಕರಿಸುವಂತೆ ಕೋರಿ ಕರ್ನಾಟಕ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮಂಗಳವಾರ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಇಂದು ಕರ್ನಾಟಕ ತನ್ನ ಅರ್ಜಿಯನ್ನು ಸುಪ್ರೀಂ ಕೋರ್ಟ್ ರಿಜಿಸ್ಚ್ರಾರ್ ಅವರಿಗೆ ಸಲ್ಲಿಕೆ ಮಾಡಿದೆ ಎಂದು ತಿಳಿದುಬಂದಿದೆ. ಕರ್ನಾಟಕ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸುತ್ತಿಲ್ಲ  ಎಂದು ಆರೋಪಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸುತ್ತಿದ್ದು, ಇಂದಿನ ವಿಚಾರಣೆ ವೇಳೆ ಕರ್ನಾಟಕದ ಅರ್ಜಿಯ ಪ್ರಸ್ತಾಪವಾಗಿಲ್ಲ.  ಹೀಗಾಗಿ ನಾಳೆ ಅರ್ಜಿಯ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರೇ ಕರ್ನಾಟಕ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದುಬಂದಿದ್ದು, ತಮಿಳುನಾಡಿಗೆ ನೀರು  ಬಿಡದಿರುವ ತನ್ನ ನಿರ್ಧಾರಕ್ಕೆ ಕರ್ನಾಟಕ ಸರ್ಕಾರ ನಾಳೆ ಸಮರ್ಥನೆ ನೀಡಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.