ಕಾವೇರಿ ಹಿನ್ನಡೆ: ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಈ ಕುರಿತು ಚರ್ಚಿಸಲು ಮುಖ್ಯಮಂತ್ರಿ...
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ಮೈಸೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಈ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿದ ಸಚಿವ ಎಚ್,ಸಿ.ಮಹದೇವಪ್ಪ ಅವರು, ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ನಾಳೆ ಸಂಪುಟ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ತಮಿಳುನಾಡಿಗೆ ನೀರು ಬಿಡುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇದೇ ವೇಳೆ ಜನ ಶಾಂತಿಕಾಪಾಡಬೇಕು ಎಂದು ಸಚಿವರು ಮನವಿ ಮಾಡಿದರು.
ಸೆ.20ರ ಆದೇಶವನ್ನು ಮಾರ್ಪಡಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ನಾಳೆಯಿಂದ ನಿತ್ಯ 6 ಸಾವಿರ ಕ್ಯೂಸೆಕ್ ನಂತೆ ಮೂರು ದಿನಗಳ ಕಾಲ ಒಟ್ಟು 18 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com