ಸುಪ್ರೀಂ ತೀರ್ಪು ಒಂದು ದುರಂತ ಎಂದ ಮಾಜಿ ಪ್ರಧಾನಿ

Published On :
ಬೆಂಗಳೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಶುಕ್ರವಾರದ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ಇದೊಂದು ದುರಂತ ಎಂದಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು 18 ರಂದು ತ್ರಿಸದಸ್ಯ ಪೀಠದಲ್ಲಿ ವಿಚಾರಣೆಗೆ ಈ ಹಿಂದೆ ಆದೇಶಿಸಲಾಗಿತ್ತು. ಇದರ ಮಧ್ಯ ದ್ವಿಸದಸ್ಯ ಪೀಠ ಆದೇಶ ನೀಡಲು ಹೇಗೆ ಸಾಧ್ಯ ಪ್ರಶ್ನಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಎಷ್ಟು ಮಾತನಾಡಿದರೂ ಅಷ್ಟೇ... ಎಂದು ತೀವ್ರ ಬೇಸರ ವ್ಯಕ್ತಪಡಿಸಿದ ದೇವೇಗೌಡರು, ತರಾತುರಿಯಲ್ಲಿ ದ್ವಿಸದಸ್ಯ ಪೀಠ ಆದೇಶ ನೀಡಿದೆ. 18ಕ್ಕೆ ವಿಚಾರಣೆ ಇದೆ ಎಂದು ಕರ್ನಾಟಕ ಪರ ವಕೀಲ ಫಾಲಿ ನಾರಿಮನ್ ಹೇಳಬಹುದಿತ್ತು ಎಂದರು.
ಅಕ್ಟೋಬರ್ 1 ರಿಂದ ಅ.6 ರವರೆಗೆ ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಸುಪ್ರೀಕೋರ್ಟ್ ಇಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಅಲ್ಲದೆ ಮೂರು ದಿನದಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


