ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವುದನ್ನು ನಿಲ್ಲಿಸಬೇಕು ಮತ್ತು ಕಣಿವೆಗೆ ಶಾಂತಿ ಹಿಂದಿರುಗಲು ಅನುವು ಮಾಡಿಕೊಡಬೇಕು ಎಂದು ಮುಖ್ಯಮಂತ್ರಿ ಮೆಹಬೂಬ ಮುಫ್ತಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವುದನ್ನು ನಿಲ್ಲಿಸಬೇಕು ಮತ್ತು ಕಣಿವೆಗೆ ಶಾಂತಿ ಹಿಂದಿರುಗಲು ಅನುವು ಮಾಡಿಕೊಡಬೇಕು ಎಂದು ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಮಂಗಳವಾರ ಹೇಳಿದ್ದಾರೆ.
ತಮ್ಮ ಸಹೋದರ ತಸಡುಕ್ ಹುಸೇನ್ ಸಯೀದ್ ಸ್ಪರ್ಧಿಸುತ್ತಿರುವ ಕ್ಷೇತ್ರದಿಂದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ಮುಫ್ತಿ "ಭಯೋತ್ಪಾದನೆಗೆ ಕುಮ್ಮಕ್ಕು ಕೊಡುವುದನ್ನು ನಿಲ್ಲಿಸಿ, ಕಣಿವೆಗೆ ಶಾಂತಿ ಮರುಕಳಿಸಲು ಬಿಡಿ" ಎಂದಿದ್ದಾರೆ.
ರಾಜ್ಯದಲ್ಲಿ ಯುವಕರ ದೊಡ್ಡ ಸಮಸ್ಯೆ ನಿರುದ್ಯೋಗ ಎಂದಿರುವ ಅವರು "ನಿರುದ್ಯೋಗ ಅತಿ ದೊಡ್ಡ ಸವಾಲಾಗಿದ್ದು ಅದನ್ನು ನಾವು ಸಮರ್ಥವಾಗಿ ನಿಭಾಯಿಸಲಿದ್ದೇವೆ" ಎಂದಿದ್ದಾರೆ.
ತಸಡುಕ್ ವಿರುದ್ಧ ಪ್ರಮುಖ ಅಭ್ಯರ್ಥಿ ಕಾಂಗ್ರೆಸ್ ಪಕ್ಷದ ಜಿ ಎ ಮೀರ್ ಅವರನ್ನು ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಕೂಡ ಬೆಂಬಲಿಸಿದೆ.