ಪ್ರಧಾನ ಸುದ್ದಿ

ಸಂಸತ್ ಸಮಯವನ್ನು ಹಾಳು ಮಾಡಬೇಡಿ; ಹೋಗಿ ಚುನಾವಣಾ ಆಯೋಗವನ್ನು ಕೇಳಿ: ಬಿಜೆಪಿ ಆಕ್ರೋಶ

ಸಂಸತ್ ಸಮಯವನ್ನು ಹಾಳು ಮಾಡಬೇಡಿ; ಹೋಗಿ ಚುನಾವಣಾ ಆಯೋಗವನ್ನು ಕೇಳಿ: ಬಿಜೆಪಿ ಆಕ್ರೋಶ
ರಾಜ್ಯಸಭೆ
Published On :

ನವದೆಹಲಿ: ಮಧ್ಯ ಪ್ರದೇಶದಲ್ಲಿ ದೋಷ ಪೂರಿತ ಮತಯಂತ್ರಗಳ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಕಲಾಪದಲ್ಲಿ ಪ್ರತಿಪಕ್ಷ ಸದಸ್ಯರು ಬುಧವಾರ ಭಾರಿ ಕೋಲಾಹಲ ಸೃಷ್ಟಿಸುತ್ತಿದೆ.

ಇಂದು ರಾಜ್ಯಸಭೆಯಲ್ಲಿ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಹಾಗೂ ಎಸ್ ಪಿ ಮುಖಂಡ ರಾಮ್ ಗೋಪಾಲ್ ಯಾದವ್ ಅವರು ವಿಷಯ ಪ್ರಸ್ತಾಪಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದ ಗಮನ ಸೆಳೆದರು. ಇದಕ್ಕೆ ಬೆಂಬಲ  ನೀಡಿದ ಕಾಂಗ್ರೆಸ್ ಸದಸ್ಯರು ಚುನಾವಣಾ ಆಯೋಗ ಕೂಡಲೇ ವಿದ್ಯುನ್ಮಾನ ಮತಯಂತ್ರಗಳನ್ನು ನಿಷೇಧಿಸಿ ಅದರ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಉಪ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದರು. ಅಲ್ಲದೆ ದೋಷ  ಪೂರಿತ ಇವಿಎಂ ಪ್ರಕರಣದಲ್ಲಿ ಬಿಜೆಪಿ ಕೈವಾಡವಿದೆ ಎಂದೂ ಗಂಭೀರ ಆರೋಪ ಮಾಡಿದರು.

ಇದನ್ನು ವಿರೋಧಿಸಿದ ಬಿಜೆಪಿ ಚುನಾವಣಾ ಸೋಲನ್ನು ಅರಗಿಸಿಕೊಳ್ಳಲಾಗದೇ ಸುಖಾಸುಮ್ಮನೆ ಬಿಜೆಪಿ ಪಕ್ಷದ ಮೇಲೆ ಆರೋಪ ಹೊರಿಸಲಾಗುತ್ತಿದೆ ಎಂದು ಕಿಡಿಕಾರಿತು. ಈ ವೇಳೆ ಮಾತನಾಡಿದ ಬಿಜೆಪಿ ಸದಸ್ಯ ಮುಕ್ತಾರ್  ಅಬ್ಬಾಸ್ ನಖ್ವಿ ಅವರು, ವಿಪಕ್ಷಗಳು ಚುನಾವಣಾ ಸೋಲನ್ನು ಒಪ್ಪಿಕೊಳ್ಳಬೇಕಿದ್ದು, ಪ್ರಜೆಗಳ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದರು. ಮತಯಂತ್ರದಲ್ಲಿ ದೋಷವಿದ್ದರೆ ಚುನಾವಣಾ ಆಯೋಗವನ್ನು ಕೇಳಬೇಕೇ ಹೊರತು  ಸಂಸತ್ ನ ಅಮೂಲ್ಯ ಸಮಯವನ್ನು ವ್ಯರ್ಥಮಾಡಬಾರದು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.