ದೆಹಲಿ ಕೋರ್ಟ್ ಈ ಮುಂಚೆ ಕಳೆದ ವರ್ಷ ನವೆಂಬರ್ 4ರಂದು ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿತ್ತು. ಆದರೆ ಜಾರಿ ನಿರ್ದೇಶನಾಲಯ ಅದನ್ನು ಜಾರಿ ಮಾಡಲು ವಿಫಲವಾದ ಹಿನ್ನೆಲೆಯಲ್ಲಿ ಈಗ ಓಪನ್ ಎಂಡೆಡ್ ವಾರಂಟ್ ಹೊರಡಿಸಿದ್ದು, ಇದನ್ನು ಜಾರಿಗೊಳಿಸಲು ಕಾಲ ಮಿತಿ ಇಲ್ಲ. ಆದರೆ ಎರಡು ತಿಂಗಳೊಳಗೆ ಕ್ರಮ ತೆಗೆದುಕೊಂಡ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿ ಕೋರ್ಟ್ ವಿಚಾರಣೆಯನ್ನು ನವೆಂಬರ್ 8ಕ್ಕೆ ಮುಂದೂಡಿದೆ.