ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವ ಪ್ರಸಾದ್ ಜಯಭೇರಿ

ತೀವ್ರ ಕುತೂಹಲ ಕೆರಳಿಸಿದ್ದ ಗುಂಡ್ಲು ಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಮಹದೇವ ಪ್ರಸಾದ್ ಅವರು ಜಯಭೇರಿ ಭಾರಿಸಿದ್ದು, ಬಿಜೆಪಿ ಅಭ್ಯರ್ಥಿ ನಿರಂಜನ್ ಕುಮಾರ್ ಅವರ ವಿರುದ್ಧ ಒಟ್ಟು 12, 077 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು:  11:41:25 AM ತೀವ್ರ ಕುತೂಹಲ ಕೆರಳಿಸಿದ್ದ ಗುಂಡ್ಲು ಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಮಹದೇವ ಪ್ರಸಾದ್ ಅವರು ಜಯಭೇರಿ ಭಾರಿಸಿದ್ದು, ಬಿಜೆಪಿ ಅಭ್ಯರ್ಥಿ ನಿರಂಜನ್ ಕುಮಾರ್ ಅವರ ವಿರುದ್ಧ ಒಟ್ಟು 12, 077 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.
---------
11:18:42 AM 14ನೇ ಸುತ್ತಿನ ಮತಎಣಿಕೆ ಮುಕ್ತಾಯದ ಬಳಿಕವೂ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವ ಪ್ರಸಾದ್ ಅವರು 11, 254 ಮತಗಳ ಮುನ್ನಡೆ ಸಾಧಿಸಿದ್ದು, ಒಟ್ಟು 81, 101 ಮತಗಳನ್ನು ಪಡೆದಿದ್ದಾರೆ.

ಬಿಜೆಪಿ ಅಭ್ಯರ್ಥಿ ನಿರಂಜನ ಕುಮಾರ್ ಅವರು 69, 847 ಮತಗಳನ್ನು ಪಡೆದಿದ್ದಾರೆ.
----
11:16:28 AM
ನಂಜನಗೂಡು ವಿಧಾನಸಭಾ ಕ್ಷೇತ್ರ ಉಪ ಚುನವಾಣೆಯ 11 ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವ ಮೂರ್ತಿ ಅವರು ಮುನ್ನಡೆ ಅಂತರವನ್ನು 16, 316 ಮತಗಳಿಗೆ ಹಿಗ್ಗಿಸಿಕೊಂಡಿದ್ದಾರೆ.

ಕೇಶವ ಮೂರ್ತಿ ಅವರಿಗೆ ಒಟ್ಟು 41, 945 ಮತಗಳು ಲಭಿಸಿದ್ದು, ಅವರ ಪ್ರತಿಸ್ಪರ್ಧಿ ಬಿಜೆಪಿ ಶ್ರೀನಿವಾಸ ಪ್ರಸಾದ್ ಅವರಿಗೆ 32, 218 ಮತಗಳು ಲಭಿಸಿವೆ.
-----
11:14:42 AM 13ನೇ ಸುತ್ತಿನ ಮತಎಣಿಕೆ ಮುಕ್ತಾಯದ ಬಳಿಕವೂ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವ ಪ್ರಸಾದ್ ಅವರು 8, 727 ಮತಗಳ ಮುನ್ನಡೆ ಸಾಧಿಸಿದ್ದು, ಒಟ್ಟು 73, 904 ಮತಗಳನ್ನು ಪಡೆದಿದ್ದಾರೆ.

ಬಿಜೆಪಿ ಅಭ್ಯರ್ಥಿ ನಿರಂಜನ ಕುಮಾರ್ ಅವರು 65, 177 ಮತಗಳನ್ನು ಪಡೆದಿದ್ದು, ಇನ್ನೂ 55 ಸಾವಿರ ಮತಗಳ ಎಣಿಕೆಯಾಗಬೇಕಿದೆ.
----------
ನಂಜನಗೂಡು ವಿಧಾನಸಭಾ ಕ್ಷೇತ್ರ ಉಪ ಚುನವಾಣೆಯ 10 ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವ ಮೂರ್ತಿ ಅವರು ಮುನ್ನಡೆ ಅಂತರವನ್ನು 17, 416 ಮತಗಳಿಗೆ ಹಿಗ್ಗಿಸಿಕೊಂಡಿದ್ದಾರೆ.

ಕೇಶವ ಮೂರ್ತಿ ಅವರಿಗೆ ಒಟ್ಟು 49, 634 ಮತಗಳು ಲಭಿಸಿದ್ದು, ಅವರ ಪ್ರತಿಸ್ಪರ್ಧಿ ಬಿಜೆಪಿ ಶ್ರೀನಿವಾಸ ಪ್ರಸಾದ್ ಅವರಿಗೆ 32, 218 ಮತಗಳು ಲಭಿಸಿವೆ.
-----
11:00:10 AM
11ನೇ ಸುತ್ತಿನ ಮತಎಣಿಕೆ ಮುಕ್ತಾಯದ ಬಳಿಕವೂ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವ ಪ್ರಸಾದ್ ಅವರು 7, 416 ಮತಗಳ ಮುನ್ನಡೆ ಸಾಧಿಸಿದ್ದು, ಒಟ್ಟು 61, 879 ಮತಗಳನ್ನು ಪಡೆದಿದ್ದಾರೆ.

ಬಿಜೆಪಿ ಅಭ್ಯರ್ಥಿ ನಿರಂಜನ ಕುಮಾರ್ ಅವರು 55, 813 ಮತಗಳನ್ನು ಪಡೆದಿದ್ದು, ಇನ್ನೂ 55 ಸಾವಿರ ಮತಗಳ ಎಣಿಕೆಯಾಗಬೇಕಿದೆ.
-----
10:26:31 AM ನಂಜನಗೂಡು ವಿಧಾನಸಭಾ ಕ್ಷೇತ್ರ ಉಪ ಚುನವಾಣೆಯ 7 ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವ ಮೂರ್ತಿ ಅವರು ಮುನ್ನಡೆ ಅಂತರವನ್ನು 15, 896 ಮತಗಳಿಗೆ ಹಿಗ್ಗಿಸಿಕೊಂಡಿದ್ದಾರೆ.

ಕೇಶವ ಮೂರ್ತಿ ಅವರಿಗೆ ಒಟ್ಟು 41, 196 ಮತಗಳು ಲಭಿಸಿದ್ದು, ಅವರ ಪ್ರತಿಸ್ಪರ್ಧಿ ಬಿಜೆಪಿ ಶ್ರೀನಿವಾಸ ಪ್ರಸಾದ್ ಅವರಿಗೆ 25, 300 ಮತಗಳು ಲಭಿಸಿವೆ.
-------
 10:17:30 AM
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ 9ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವ ಪ್ರಸಾದ್ ಅವರು 4, 650 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ.

ಗೀತಾ ಮಹದೇವ ಪ್ರಸಾದ್ ಅವರು ಒಟ್ಟು 49, 766 ಮತಗಳ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ನಿರಂಜನ ಕುಮಾರ್ ಅವರು 45, 116 ಮತಗಳನ್ನು ಪಡೆದಿದ್ದಾರೆ.
----
10:10:28 AM ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ 8ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವ ಪ್ರಸಾದ್ ಅವರು ಮುನ್ನಡೆ ಅಂತರವನ್ನು  3, 824 ಮತಗಳಿಗೆ ಹಿಗ್ಗಿಸಿಕೊಂಡಿದ್ದಾರೆ.

ಗೀತಾ ಮಹದೇವ ಪ್ರಸಾದ್ ಅವರು ಒಟ್ಟು 45, 489 ಮತಗಳ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ನಿರಂಜನ ಕುಮಾರ್ ಅವರು 41, 665 ಮತಗಳನ್ನು ಪಡೆದಿದ್ದಾರೆ.
-----
10:07:57 AM ನಂಜನಗೂಡು ವಿಧಾನಸಭಾ ಕ್ಷೇತ್ರ ಉಪ ಚುನವಾಣೆಯ 6 ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವ ಮೂರ್ತಿ ಅವರು ಮುನ್ನಡೆ ಅಂತರವನ್ನು 15, 585 ಮತಗಳಿಗೆ ಹಿಗ್ಗಿಸಿಕೊಂಡಿದ್ದಾರೆ.

ಕೇಶವ ಮೂರ್ತಿ ಅವರಿಗೆ ಒಟ್ಟು 35, 936 ಮತಗಳು ಲಭಿಸಿದ್ದು, ಅವರ ಪ್ರತಿಸ್ಪರ್ಧಿ ಬಿಜೆಪಿ ಶ್ರೀನಿವಾಸ ಪ್ರಸಾದ್ ಅವರಿಗೆ 20, 351 ಮತಗಳು ಲಭಿಸಿವೆ.
-----
10:01:22 AM ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ 7ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವ ಪ್ರಸಾದ್ ಅವರು 3, 078 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಗೀತಾ ಮಹದೇವ ಪ್ರಸಾದ್ ಅವರು ಒಟ್ಟು 37, 047 ಮತಗಳ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ನಿರಂಜನ ಕುಮಾರ್ ಅವರು 37, 047 ಮತಗಳನ್ನು ಪಡೆದಿದ್ದಾರೆ.
-----
9:58:07 AMನಂಜನಗೂಡು ವಿಧಾನಸಭಾ ಕ್ಷೇತ್ರ ಉಪ ಚುನವಾಣೆಯ 5ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವ ಮೂರ್ತಿ ಅವರು ಒಟ್ಟು 12. 927 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಕೇಶವ ಮೂರ್ತಿ ಅವರಿಗೆ ಒಟ್ಟು 30, 061 ಮತಗಳು ಲಭಿಸಿದ್ದು, ಅವರ ಪ್ರತಿಸ್ಪರ್ಧಿ ಬಿಜೆಪಿ ಶ್ರೀನಿವಾಸ ಪ್ರಸಾದ್ ಅವರಿಗೆ 17, 134 ಮತಗಳು ಲಭಿಸಿವೆ.
--------
9:28:30 AM ತೀವ್ರ ಕುತೂಹಲ ಕೆರೆಳಿಸಿರುವ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪ ಚನಾವಣೆಯ ಮತಎಣಿಕೆ ಕಾರ್ಯ ನಿರ್ಣಾಯಕ ಘಟ್ಟ ತಲುಪಿದ್ದು, ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮುನ್ನಡೆ  ಸಾಧಿಸಿದ್ದಾರೆ.

ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವ ಪ್ರಸಾದ್ ಅವರು 4ನೇ ಸುತ್ತಿನ ಮತಎಣಿಕೆ ಮುಕ್ತಾಯದ ಬಳಿಕ  23856 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ನಿರಂಜನ ಕುಮಾರ್ ಅವರು 20328  ಮತಗಳನ್ನು ಪಡೆದಿದ್ದಾರೆ. ಆ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೀತಾ ಅವರು ಒಟ್ಟು 3528 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಇನ್ನು ನಂಜನಗೂಡು ವಿಧಾನಸಭಾ ಉಪ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವ ಮೂರ್ತಿ ಅವರು ಒಟ್ಟು 18477 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ  ಪ್ರಸಾದ್ ಅವರು 9244 ಮತಗಳನ್ನು ಪಡೆದಿದ್ದು, ಆ ಮೂಲಕ ಶ್ರೀನಿವಾಸ ಪ್ರಸಾದ್ ಅವರು 9233 ಮತಗಳ ಹಿನ್ನಡೆ ಅನುಭವಿಸಿದ್ದಾರೆ.
-----
9:09:23 AM ನಂಜನಗೂಡು ಉಪ ಚುನಾವಣೆಯ ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಪಕ್ಷದ ಕಳಲೆ ಕೇಶವ ಮೂರ್ತಿ ಅವರು ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಪ್ರಸಾದ್ ಅವರಿಗಿಂತ 4712 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಎರಡನೇ ಹಂತದ ಮತಎಣಿಕೆ ಮುಕ್ತಾಯದ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವ ಮೂರ್ತಿ ಅವರಿಗೆ ಒಟ್ಟು 11524 ಮತಗಳು ಲಭಿಸಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಪ್ರಸಾದ್ ಅವರಿಗೆ 6812 ಮತಗಳು ಲಭಿಸಿವೆ.
----
9:03:38 AM ಗುಂಡ್ಲುಪೇಟೆ ಉಪ ಚುನಾವಣೆಯ ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಪಕ್ಷದ ಗೀತಾ ಮಹದೇವ ಪ್ರಸಾದ್ ಅವರು ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್ ಅವರಿಗಿಂತ 2399 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಎರಜನೇ ಹಂತದ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಪಕ್ಷದ ಗೀತಾ ಮಹದೇವ ಪ್ರಸಾದ್ ಅವರು 12338 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ನಿರಂಜನ ಕುಮಾರ್ ಅವರು 9938 ಮತಗಳನ್ನು ಪಡೆದಿದ್ದು, ಒಟ್ಟು 2399 ಮತಗಳ ಹಿನ್ನಡೆ ಅನುಭವಿಸಿದ್ದಾರೆ.
----
8:47:19 AM ಗುಂಡ್ಲುಪೇಟೆ ಉಪ ಚುನಾವಣೆಯ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಪಕ್ಷದ ಗೀತಾ ಮಹದೇವ ಪ್ರಸಾದ್ ಅವರು ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್ ಅವರಿಗಿಂತ ಮುನ್ನಡೆ ಸಾಧಿಸಿದ್ದಾರೆ.

ಮೊದಲ ಹಂತದ ಎಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಗೀತಾ ಮಹದೇವ ಪ್ರಸಾದ್ ಅವರು 6542 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ನಿರಂಜನ ಕುಮಾರ್ ಅವರು 4771  ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ 1771 ಮತಗಳ ಆರಂಭಿಕ ಮುನ್ನಡೆ ದೊರೆತಿದೆ.
------
8:36:21 AM ನಂಜನಗೂಡು ಉಪ ಚುನಾವಣೆಯ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಪಕ್ಷದ ಕಳಲೆ ಕೇಶವ ಮೂರ್ತಿ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಪ್ರಸಾದ್ ಅವರಿಗಿಂತ ಮುನ್ನಡೆ ಸಾಧಿಸಿದ್ದಾರೆ.

ಮೊದಲ ಹಂತದ ಎಣಿಕೆಯಲ್ಲಿ ಒಟ್ಟು 9 ಸಾವಿರ 400ಕ್ಕೂ ಹೆಚ್ಚು ಮತಗಳ ಪೈಕಿ ಕಾಂಗ್ರೆಸ್ ಪಕ್ಷದ ಕಳಲೆ ಕೇಶವ ಮೂರ್ತಿ ಅವರು 5875 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಪ್ರಸಾದ್ ಅವರು 3574 ಮತಗಳನ್ನು  ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ 2301 ಮತಗಳ ಆರಂಭಿಕ ಮುನ್ನಡೆ ದೊರೆತಿದೆ.
-------

ತೀವ್ರ ಕುತೂಹಲ ಕೆರೆಳಿಸಿರುವ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪ ಚನಾವಣೆಯ ಮತಎಣಿಕೆ ಕಾರ್ಯ ಆರಂಭವಾಗಿದ್ದು, ಒಟ್ಟು 16 ಸುತ್ತುಗಳಲ್ಲಿ ಮತಎಣಿಕೆ ಕಾರ್ಯ ನಡೆಯಲಿದೆ.

ಬೆಳಿಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, 15 ನಿಮಿಷಗಳಲ್ಲಿ ಮೊದಲ ಸುತ್ತಿನ ಫಲಿತಾಂಶ ಹೊರಬೀಳಲಿದೆ. 9 ಗಂಟೆಗೆ ಸೋಲು–ಗೆಲುವಿನ ಮುನ್ಸೂಚನೆ ಲಭಿಸುವ ಸಾಧ್ಯತೆ ಇದೆ. 11 ಗಂಟೆಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ತಜ್ಞರು ತಿಳಿಸಿದ್ದಾರೆ.

ಗುಂಡ್ಲು ಪೇಟೆಯ ಸೆಂಟ್ ಜಾನ್ ಹೈಸ್ಕೂಲ್ ನಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಒಟ್ಟು 16 ಟೇಬಲ್ ಗಳಲ್ಲಿ 16 ಸುತ್ತಿನ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಅಂತೆಯೇ ನಂಜನಗೂಡಿನ ಜೆಎಸ್ ಎಸ್ ವಿದ್ಯಾಸಂಸ್ಥೆಯಲ್ಲಿ ಮತಎಣಿಕೆ ಕಾರ್ಯ ನಡೆಯುತ್ತಿದ್ದು, ಒಟ್ಟು 14 ಟೇಬಲ್ ಗಳಲ್ಲಿ 16 ಸುತ್ತಿನ ಮತಎಣಿಕೆ ಕಾರ್ಯ ನಡೆಯುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಭಾನುವಾರ ನಡೆದ ಚುನಾವಣೆಯಲ್ಲಿ ದಾಖಲೆ ಪ್ರಮಾಣದ ಮತದಾನವಾಗಿದ್ದು, ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ.

ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಹಾಗೂ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸಪ್ರಸಾದ್‌, ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಂ.ಸಿ.ಮೋಹನಕುಮಾರಿ (ಗೀತಾ) ಹಾಗೂ ಬಿಜೆಪಿ ಅಭ್ಯರ್ಥಿ ಸಿ.ಎಸ್‌.ನಿರಂಜನಕುಮಾರ್‌ ಸ್ಪರ್ಧಾ ಕಣದಲ್ಲಿದ್ದಾರೆ.

ಶಾಸಕರಾಗಿದ್ದ ಮಾಜಿ ಸಚಿವ ಎಚ್ ಎಸ್ ಮಹದೇವ ಪ್ರಸಾದ್ ಅವರು ಅಕಾಲಿಕ ಮರಣವನ್ನಪ್ಪಿದ ಹಿನ್ನಲೆಯಲ್ಲಿ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದ್ದು, ಮಾಜಿ ಶ್ರೀನಿವಾಸ ಪ್ರಸಾದ್ ಅವರ ರಾಜಿನಾಮೆಯಿಂದ ನಂಜನಗೂಡು ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಈ ಹಿನ್ನಲೆಯಲ್ಲಿ ನಂಜನಗೂಡಿನಲ್ಲಿ ಮತದಾನ ನಡೆಯುತ್ತಿದ್ದು, ಕಾಂಗ್ರೆಸ್ ತೊರೆದಿರುವ ಶ್ರೀನಿವಾಸ ಪ್ರಸಾದ್ ಇದೀಗ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com