ಒಡಿಶಾದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಗೂ ಮುನ್ನ ರೋಡ್ ಶೋ ನಡೆಸಿದ ಮೋದಿ

ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಭಾಗವಹಿಸುವುದಕ್ಕಾರಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ...
ನರೇಂದ್ರ ಮೋದಿ
ನರೇಂದ್ರ ಮೋದಿ
Updated on: 
ಭುವನೇಶ್ವರ: ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಭಾಗವಹಿಸುವುದಕ್ಕಾರಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಒಡಿಶಾ ರಾಜಧಾನಿ ಭುವನೇಶ್ವರಕ್ಕೆ ಆಗಮಿಸಿದ್ದು, ಕಾರ್ಯಕಾರಣಿಗೂ ಮುನ್ನ ಬೃಹತ್ ರೋಡ್ ಶೋ ನಡೆಸಿದರು. ಈ ವೇಳೆ ಸಾವಿರಾರು ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಇಲ್ಲಿನ ಜನತಾ ಮೈದಾನದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಗೆ ಚಾಲನೆ ನೀಡಿದ್ದು, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ, 13 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಸಚಿವರು ಸೇರಿದಂತೆ ಒಟ್ಟು 300 ನಾಯಕರು ಭಾಗವಹಿಸುತ್ತಿದ್ದಾರೆ.
ಇತ್ತೀಚಿಗೆ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ ಈಗ ಬಿಜೆಪಿ ಈ ವರ್ಷಾಂತ್ಯಕ್ಕೆ ನಡೆಯಲಿರುವ ಗುಜರಾತ್ ಚುನಾವಣೆ ಮತ್ತು ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದು, 2019ರ ಲೋಕಸಭೆ ಚುನಾವಣೆಗೂ ಸಿದ್ಧತೆ ನಡೆಸುತ್ತಿದೆ.
ಒಡಿಶಾದಲ್ಲಿ ಬಿಜೆಪಿಯನ್ನು ಸುಭದ್ರಗೊಳಿಸುವ ಕುರಿತು ಮತ್ತು 2019ರ ಚುನಾವಣೆಯ ಸಂಬಂಧ ಕಾರ್ಯಕಾರಿಣಿಯಲ್ಲಿ ಪ್ರಮುಖವಾಗಿ ಚರ್ಚೆ ನಡೆಯಲಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ತೋರಿದೆ. ಇದರ ಆಧಾರದ ಮೇಲೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಗುರಿಯೊಂದಿಗೆ ಒಡಿಶಾದಲ್ಲಿ ಬಿಜೆಪಿಯನ್ನು ಬಲಪಡಿಸಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ವರದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com