ಭಾರತ–ಬ್ರಿಟನ್ ನಡುವಣ ಪರಸ್ಪರ ಕಾನೂನು ನೆರವು ಒಪ್ಪಂದ(ಎಂಎಲ್‌ಎಟಿ)ದ ಅಡಿಯಲ್ಲಿ ಮಲ್ಯ ಅವರನ್ನು ಹಸ್ತಾಂತರಿಸುವಂತೆ ಬ್ರಿಟನ್‌ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕೃತವಾಗಿ ಮನವಿ ಮಾಡಿತ್ತು. ಅದನ್ನು ಬ್ರಿಟನ್ ಸರ್ಕಾರ ಪುರಷ್ಕರಿಸಿತ್ತು. ಅಲ್ಲದೆ ಮಲ್ಯ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸುವ ಬಗ್ಗೆ ಲಂಡನ್ ಕೋರ್ಟ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿತ್ತು.