ಬೀದರ್ ಬಳಿ ಹಳಿ ತಪ್ಪಿದ ಔರಂಗಾಬಾದ್-ಹೈದರಾಬಾದ್ ಪ್ಯಾಸೆಂಜರ್ ರೈಲು, ಹಲವರಿಗೆ ಗಾಯ

ಬೀದರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಔರಂಗಾಬಾದ್-ಹೈದರಾಬಾದ್ ಪ್ಯಾಸೆಂಜರ್ ರೈಲು ಹಳಿ ತಪ್ಪಿದ್ದು, ಘಟನೆಯಲ್ಲಿ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಹಳಿ ತಪ್ಪಿದ ರೈಲು
ಹಳಿ ತಪ್ಪಿದ ರೈಲು

ಬೀದರ್: ಬೀದರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಔರಂಗಾಬಾದ್-ಹೈದರಾಬಾದ್ ಪ್ಯಾಸೆಂಜರ್ ರೈಲು ಹಳಿ ತಪ್ಪಿದ್ದು, ಘಟನೆಯಲ್ಲಿ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಶುಕ್ರವಾರ ಬೆಳಗಿನ ಜಾವ 3.50ರ ಸುಮಾರಿಗೆ ಔರಂಗಾಬಾದ್-ಹೈದರಾಬಾದ್ ನಡುವೆ ಸಂಚರಿಸುವ ಪ್ಯಾಸೆಂಜರ್ ರೈಲು ಕಾಳಗಾಪುರ ಮತ್ತು ಬಾಲ್ಕಿ ರೈಲ್ವೆ ನಿಲ್ದಾಣದ ನಡುವೆ ಕಾಳಗಾಪುರ ಸೇತುವೆ ಬಳಿ ರೈಲಿನ ಇಂಜಿನ್ ಮತ್ತು ಎರಡು ಬೋಗಿಗಳು ಹಳಿ ತಪ್ಪಿದ್ದು, ರೈಲು ನಿಧಾನವಾಗಿ ಚಲಿಸುತ್ತಿದ್ದ ಕಾರಣ ಆಗಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ. ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ರೈಲ್ವೇ ಅಧಿಕಾರಗಳು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಘಟನೆಯಲ್ಲಿ ಕೆಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಬಾಲ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನು ಘಟನಾ ಬೀದರ್ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಎಸ್ಪಿ ಪ್ರಕಾಶ್ ನಿಕ್ಕಮ್ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸಚಿವ ಈಶ್ವರ ಖಂಡ್ರೆ ಅವರು ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಪ್ರಯಾಣಿಕರ ಆರೋಗ್ಯ ವಿಚಾರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com