ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೂ ಆಧಾರ್ ಕಡ್ಡಾಯಗೊಳಿಸಿದ ಕೇಂದ್ರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಕೆ. ಸಿಕ್ರಿ ನೇತೃತ್ವದ ಪೀಠ, ಆಧಾರ್ ಒಂದು ಆಯ್ಕೆ ಅಷ್ಟೇ. ಆದರೆ ಆದಾಯ ತೆರಿಗೆಯ ರಿಟರ್ನ್ಸ್ ಸಲ್ಲಿಕೆಗೆ ಆಧಾರ್ ಕಡ್ಡಾಯಗೊಳಿಸುವುದರ ಅಗತ್ಯವೇನಿದೆ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.