ಜಯಾ ಆಸ್ಪತ್ರೆಯ ವಿಡಿಯೋ ಬಿಡುಗಡೆ ಮಾಡುವುದಾಗಿ ಶಶಿಕಲಾ ಸಂಬಂಧಿ ಬೆದರಿಕೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜೆ.ಜಯಲಲಿತಾ ಅವರ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂಬ ಬೇಡಿಕೆ ಹೆಚ್ಚುತ್ತಿರುವ....
ವಿ.ಕೆ.ಶಶಿಕಲಾ
ವಿ.ಕೆ.ಶಶಿಕಲಾ
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜೆ.ಜಯಲಲಿತಾ ಅವರ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂಬ ಬೇಡಿಕೆ ಹೆಚ್ಚುತ್ತಿರುವ ಬೆನ್ನಲ್ಲೇ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಸಂಬಂಧಿಯೊಬ್ಬರು ಆಸ್ಪತ್ರೆಯಲ್ಲಿ ಜಯಾ ಚಿಕಿತ್ಸೆ ವೇಳೆ ಚಿತ್ರೀಕರಿಸಿದ ವಿಡಿಯೋ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಶಶಿಕಲಾ ಸಂಬಂಧ ಜಯಾನಂದ್ ದಿನಕರನ್ ಅವರು, ಅಮ್ಮ(ಜಯಲಲಿತಾ) ಮತ್ತು ಚಿನ್ನಮ್ಮ(ಶಶಿಕಲಾ) ನಡುವಿನ ಸಂಬಂಧ ಎಂಥಹದ್ದು ಎಂಬ ಬಗ್ಗೆ ವಿಡಿಯೋ ಬಿಡುಗಡೆ ಮಾಡುವುದಾಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು. ಆದರೆ ಕೆಲವೇ ಗಂಟೆಗಳಲ್ಲಿ ಆ ಪೋಸ್ಟ್ ಅನ್ನು ತೆಗೆದು ಹಾಕಿದ್ದಾರೆ ಎಂದು ಎನ್ ಡಿಟಿವಿ ವರದಿ ಮಾಡಿದೆ.
'ಕೊಲೆಗಾರನಾಗಿದ್ದಾಗ್ಯೂ, ಅಮ್ಮ ಅವರ ಚಿತ್ರ ಶಶಿಕಾಲಾರಿಂದ ಬಹಿರಂಗಗೊಂಡಿಲ್ಲ, ಏಕೆಂದರೆ ಅವರ ವೈರಿಗಳನ್ನು ಹಸಿರು ಬಣ್ಣದ ನಿಲುವಂಗಿಯಲ್ಲಿ ನೋಡಲು ಬಯಸುವುದಿಲ್ಲ' ಎಂದು ಫೇಸ್ ಬುಕ್ ನಲ್ಲಿ ಬರೆದುಕೊಳ್ಳಲಾಗಿತ್ತು. 
ಜಯಲಲಿತಾ ಅವರು ದೀರ್ಘ ಕಾಲದ ಅನಾರೋಗ್ಯದಿಂದ ಡಿಸೆಂಬರ್ 5ರಂದು ನಿಧನರಾಗಿದ್ದು, ಅವರ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಬಣ ಒತ್ತಾಯಿಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com