ಅಮೆರಿಕದ ಸರ್ಜನ್‌ ಜನರಲ್‌ ಹುದ್ದೆಗೆ ಕನ್ನಡಿಗ ವಿವೇಕ್ ಮೂರ್ತಿ ರಾಜಿನಾಮೆ

ಅಮೆರಿಕದ ಸರ್ಜನ್‌ ಜನರಲ್‌ ಆಗಿದ್ದ ಕನ್ನಡಿಗ ಮಂಡ್ಯ ಮೂಲದ ಡಾ. ವಿವೇಕ್‌ ಹಲ್ಲೇಗೆರೆ ಮೂರ್ತಿ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ವಿವೇಕ್ ಮೂರ್ತಿ
ವಿವೇಕ್ ಮೂರ್ತಿ
ವಾಷಿಂಗ್ಟನ್: ಅಮೆರಿಕದ ಸರ್ಜನ್‌ ಜನರಲ್‌ ಆಗಿದ್ದ ಕನ್ನಡಿಗ ಮಂಡ್ಯ ಮೂಲದ ಡಾ. ವಿವೇಕ್‌ ಹಲ್ಲೇಗೆರೆ ಮೂರ್ತಿ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಈ ಹಿಂದಿನ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ವಿವೇಕ್ ಮೂರ್ತಿ ಅವರನ್ನು ಅಮೆರಿಕದ ಸರ್ಜನ್ ಜನರಲ್ ಹುದ್ದೆಗೆ ಆಯ್ಕೆ ಮಾಡಿದ್ದರು. ಆದರೆ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತ ಹುದ್ದೆ ತ್ಯಜಿಸುವಂತೆ ವಿವೇಕ್ ಮೂರ್ತಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಅವರು ಇಂದು ರಾಜಿನಾಮೆ ನೀಡಿದ್ದಾರೆ.
ಅಮೆರಿಕ ಸಾರ್ವಜನಿಕ ಆರೋಗ್ಯ ಸೇವೆ ಆಯೋಗದ ಮುಖ್ಯಸ್ಥರ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ವಿವೇಕ್ ಮೂರ್ತಿಗೆ ಸೂಚಿಸಲಾಗಿದೆ ಎಂದು ನಿನ್ನೆ ಅಮೆರಿಕದ ಆರೋಗ್ಯ ಮತ್ತು ಮಾನವ ಸೇವೆಗಳ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿತ್ತು.
ಮೂರ್ತಿ ಅವರನ್ನು ಸರ್ಜನ್ ಜನರಲ್ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದ್ದು, ಆಯೋಗದ ಸದಸ್ಯರಾಗಿ ಮುಂದುವರೆಯಲಿದ್ದಾರೆ ಎಂದು ತಿಳಿಸಲಾಗಿದೆ.
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮರ ಆಪ್ತ ಸರ್ಜನ್ ಜನರಲ್' ಆಗಿಯೂ ನಿಯೋಜಿತರಾಗಿದ್ದ ವಿವೇಕ್ ಮೂರ್ತಿ ಅವರಿಗೆ ಭಾರತೀಯ ಯೋಗ ಪದ್ಧತಿಯಲ್ಲಿ ಅಪಾರ ಗೌರವ ಹೊಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com