ಸುಕ್ಮಾ ದಾಳಿ; ಹುತಾತ್ಮ ಯೋಧರ ತ್ಯಾಗ ವ್ಯರ್ಥವಾಗುವುದಿಲ್ಲ: ಪ್ರಧಾನಿ ಮೋದಿ

ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಸಿಆರ್ ಪಿಎಫ್ ಯೋಧರ ಮೇಲೆ ನಡೆಸಿದ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ....
ನರೇಂದ್ರ ಮೋದಿ
ನರೇಂದ್ರ ಮೋದಿ
ನವದೆಹಲಿ: ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಸಿಆರ್ ಪಿಎಫ್ ಯೋಧರ ಮೇಲೆ ನಡೆಸಿದ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತೀವ್ರವಾಗಿ ಖಂಡಿಸಿದ್ದು, ಇದೊಂದು ಹೇಡಿತನದ ಕೃತ್ಯವಾಗಿದ್ದು, ಹುತಾತ್ಮ ಯೋಧರ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ಹೇಳಿದ್ದಾರೆ.
ಛತ್ತೀಸ್ ಗಢದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ನಡೆದ ದಾಳಿ ಹೇಡಿತನದ್ದು ಮತ್ತು ಶೋಚನೀಯವಾದದ್ದು. ಪರಿಸ್ಥಿತಿಯನ್ನು ತಾವು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ದಾಳಿಯಲ್ಲಿ ಗಾಯಗೊಂಡ ಯೋಧರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ.
ಇಂದು ಮಧ್ಯಾಹ್ನ 12.25ರ ಸುಮಾರಿಗೆ ನಕ್ಸಲರೊಂದಿಗೆ ನಡೆದ ಗುಂಡಿನ ಕಾಳದಲ್ಲಿ 26 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು, 7 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com