ಚಾಮರಾಜನಗರ: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅಳವಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಂದು ಗುಂಡ್ಲುಪೇಟೆಯ ಮಹದೇವ ಪ್ರಸಾದ್ ನಗರದಲ್ಲಿ ನಡೆದ ಮತದಾರರಿಗೆ ಕೃತಜ್ಞತೆ ಸಮರ್ಪಣಾ ಸಮಾವೇಶದಲ್ಲಿ ಮಾತನಾಡಿದ ಸಿಎಂ, ಏಪ್ರಿಲ್ 29ರಂದು ಬಸವ ಜಯಂತಿ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಬಸವಣ್ಣನವರ ಭಾವಚಿತ್ರ ಅಳವಡಿಸುವಂತೆ ಎಲ್ಲಾ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.
ನಿನ್ನೆಯಷ್ಟೆ ಮಹಾರಾಷ್ಟ್ರ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಅಳವಡಿಸುವ ಸಂಬಂಧ ಆದೇಶ ಹೊರಡಿಸಿತ್ತು. ಇದರಿಂದ ಬಸವಣ್ಣನ ತವರು ರಾಜ್ಯವಾದ ಕರ್ನಾಟಕದಲ್ಲೂ ಇಂಥ ಕ್ರಮಕೈಗೊಳ್ಳಬೇಕು ಎಂಬ ಕೂಗು ಕೇಳಿ ಬಂದಿತ್ತು.