ಪಂಜಾಬ್ ಮತ್ತು ಗೋವಾ ವಿಧಾನ ಸಭಾ ಚುನಾವಣೆಯ ಮತದಾನ ಇಂದು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಚಿಕಿತ್ಸೆ ಪಡೆಯಲು ಬೆಂಗಳೂರಿಗೆ ಬರುತ್ತಿದ್ದಾರೆ. ರಕ್ತದಲ್ಲಿ ಸಕ್ಕರೆ ಪ್ರಮಾಣ ತೀವ್ರವಾಗಿ ಏರಿಕೆಯಾಗಿದೆ, ದಿನಕ್ಕೆ 3 ಸಲ ಇನ್ಸ್ಸುಲಿನ್ ತೆಗೆದುಕೊಳ್ಳುತ್ತಿದ್ದಾರೆ. ಆದರೂ ಸಕ್ಕರೆ ಪ್ರಮಾಣ ನಿಯಂತ್ರಣಕ್ಕೆ ಬರುತ್ತಿಲ್ಲ. ಜತೆಗೆ ಜ್ವರದಿಂದಲೂ ಸಹ ಅವರು ಬಳುತ್ತಿದ್ದಾರೆ. ಹಾಗಾಗಿ ಬೆಂಗಳೂರಿನಲ್ಲಿ ನೈಸರ್ಗಿಕ ಚಿಕಿತ್ಸೆ ಪಡೆಯಲಿದ್ದಾರೆ. ಸುಮಾರು 12 ರಿಂದ 14 ದಿನ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುವ ಸಾಧ್ಯತೆ ಇದೆ ಎಂದು ದೆಹಲಿ ಸರ್ಕಾರದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.