ನನಗೆ ಸಿಎಂ ಆಗುವಂತೆ ಪನ್ನೀರ್ ಸೆಲ್ವಂ ಒತ್ತಾಯಿಸಿದ್ದರು: ಶಶಿಕಲಾ

ನನಗೆ ಮುಖ್ಯಮಂತ್ರಿಯಾಗುವಂತೆ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಅವರು ಒತ್ತಾಯಿಸಿದ್ದರು ಎಂದು ತಮಿಳುನಾಡಿನ ನಿಯೋಜಿತ ಮುಖ್ಯಮಂತ್ರಿ...
ಶಶಿಕಲಾ
ಶಶಿಕಲಾ
Updated on: 
ಚೆನ್ನೈ: ನನಗೆ ಮುಖ್ಯಮಂತ್ರಿಯಾಗುವಂತೆ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಅವರು ಒತ್ತಾಯಿಸಿದ್ದರು ಎಂದು ತಮಿಳುನಾಡಿನ ನಿಯೋಜಿತ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಅವರು ಭಾನುವಾರ ಹೇಳಿದ್ದಾರೆ.
ಎಐಎಡಿಎಂಕೆ ಪ್ರಧಾನ ಕಚೇರಿಯಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಶಿಕಲಾ ಅವರನ್ನು ನೂತನ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದ್ದು, ಈ ವೇಳೆ ಮಾತನಾಡಿದ ಶಶಿಕಲಾ ಅವರು, ಅಮ್ಮ ನಿಧನದ ನಂತರ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗುವಂತೆ ಮೊದಲು ಪನ್ನೀರ್ ಸೆಲ್ವಂ ಅವರೇ ಒತ್ತಾಯಿಸಿದ್ದರು. ಈಗ ಮತ್ತೆ ಮುಖ್ಯಮಂತ್ರಿಯಾಗುವಂತೆ ಬಲವಂತ ಮಾಡುತ್ತಿದ್ದಾರೆ ಎಂದರು.
ಶಾಸಕಾಂಗ ಸಭೆಯಲ್ಲಿ ಪನ್ನೀರ್ ಸೆಲ್ವಂ ಅವರು ಮೊದಲು ಶಶಿಕಲಾ ನಟರಾಜನ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಬಳಿಕ ಎಲ್ಲಾ ಶಾಸಕರು ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು. ಇದರೊಂದಿಗೆ ಜಯಲಲಿತಾ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆಯಲಾಗಿದೆ.
ಎಐಎಡಿಎಂಕೆ ನೂತನ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿರುವ ಶಶಿಕಲಾ ಅವರು ನಾಳೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com