ಜಯಲಲಿತಾ ನಿಧನದ ನಂತರ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಅವರ ಆಪ್ತೆ ಶಶಿಕಲಾ ನಟಜರಾಜನ್ ಅವರು ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು, ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸ್ಟಾಲಿನ್ ಅವರು, ಜಯಲಲಿತಾ ನಿಧನದ ನಂತರ ಆಡಳಿತಾರೂಢ ಎಐಎಡಿಎಂಕೆ ಪಕ್ಷದಲ್ಲಿ ನಡೆಯುತ್ತಿರುವ ಬದಲಾವಣೆಗಳ ಬಗ್ಗೆ ತೀವ್ರ ಅಸಮಧಾನ ವ್ಯಕ್ತ ಪಡಿಸಿದ್ದಾರೆ. ಅಲ್ಲದೆ ಈಗಿರುವ ಸರ್ಕಾರವು ಜನಾದೇಶದಿಂದ ರೂಪಗೊಂಡದ್ದು ಅಲ್ಲ ಎಂದು ಆರೋಪಿಸಿದ್ದಾರೆ.