ರಾಹುಲ್-ಅಖಿಲೇಶ್ ವಾರಣಾಸಿ ರೋಡ್ ಶೋ ರದ್ದು

ಉತ್ತರಪ್ರದೇಶದ ವಾರಣಾಸಿಯಲ್ಲಿ ಶುಕ್ರವಾರ ಜರುಗಬೇಕಿದ್ದ ಬಹುನಿರೀಕ್ಷಿತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಜಂಟಿ ರೋಡ್ ಶೋ ರದ್ದಾಗಿದೆ.
ರಾಹುಲ್ ಗಾಂಧಿ-ಅಖಿಲೇಶ್ ಯಾದವ್
ರಾಹುಲ್ ಗಾಂಧಿ-ಅಖಿಲೇಶ್ ಯಾದವ್
Updated on: 
ಲಖನೌ: ಉತ್ತರಪ್ರದೇಶದ ವಾರಣಾಸಿಯಲ್ಲಿ ಶುಕ್ರವಾರ ಜರುಗಬೇಕಿದ್ದ ಬಹುನಿರೀಕ್ಷಿತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಜಂಟಿ ರೋಡ್ ಶೋ ರದ್ದಾಗಿದೆ. ದೀನರ ಸಂತ ಗುರು ರವಿದಾಸ್ ಅವರ ಜನ್ಮದಿನದ ಪ್ರಯುಕ್ತ ಈ ಕಾರ್ಯಕ್ರಮ ಬದಲಾಗಿದೆ. ವಿಧಾನಸಭಾ ಚುನಾವಣೆಗೆ ವಾರಣಾಸಿಯಲ್ಲಿ ಇಂದು ಈ ಇಬ್ಬರೂ ನಾಯಕರು ಒಟ್ಟಿಗೆ ಪ್ರಚಾರ ನಡೆಸಬೇಕಿತ್ತು. 
ಗುರುವಾರ ರಾತ್ರಿ ದೂರವಾಣಿ ಕರೆ ಮೂಲಕ ರಾಹುಲ್ ಗಾಂಧಿ ಅವರ ನವದೆಹಲಿ ಕಚೇರಿಯಿಂದ ಜಿಲ್ಲಾ ಕಾಂಗ್ರೆಸ್ ಮುಖಂಡರಿಗೆ ಈ ವಿಷಯವನ್ನು ತಿಲಿಸಲಾಗಿದೆ. 
ಈಗ ಈ ರೋಡ ಶೋಗಾಗಿ ಹೊಸ ದಿನಾಂಕವನ್ನು ನಿಗದಿಪಡಿಸಲು ಚರ್ಚಿಸಲಾಗುತ್ತಿದೆ. 
ಚುನಾವಣೆಗೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಮೈತ್ರಿ ಮಾಡಿಕೊಂಡ ನಂತರ ಈ ಎರಡೂ ನಾಯಕರು ಲಖನೌ, ಕಾನ್ಪುರ ಮತ್ತು ಆಗ್ರಾಗಳಲ್ಲಿ ಭಾರಿ ರೋಡ್ ಶೋ ನಡೆಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com