ತಮಿಳುನಾಡು ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಶಶಿಕಲಾ

ಬೆಂಬಲಿತ ಶಾಸಕರೊಂದಿಗೆ ತಮಿಳುನಾಡು ರಾಜ್ಯಪಾಲ ಸಿ ವಿದ್ಯಾಸಾಗರ್ ರಾವ್ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೋರಿ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ ಕೆ ಶಶಿಕಲಾ ಇಂದು ಪತ್ರ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಚೆನ್ನೈ: ಬೆಂಬಲಿತ ಶಾಸಕರೊಂದಿಗೆ ತಮಿಳುನಾಡು ರಾಜ್ಯಪಾಲ ಸಿ ವಿದ್ಯಾಸಾಗರ್ ರಾವ್ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೋರಿ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ ಕೆ ಶಶಿಕಲಾ ಇಂದು ಪತ್ರ ಬರೆದಿದ್ದಾರೆ. 
ರಾವ್ ಗೆ ಬರೆದಿರುವ ಪತ್ರಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದ್ದು, ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ತಮ್ಮ ಸ್ಥಾನದಿಂದ ಈಗಾಗಲೇ ರಾಜೀನಾಮೆ ನೀಡಿದ್ದು, ಅದನ್ನು ಒಂದು ವಾರದ ಮುಂಚೆಯೇ ರಾಜ್ಯಪಾಲರು ಸ್ವೀಕರಿಸಿದ್ದಾರೆ ಎಂದು ಕೂಡ ಹೇಳಿದ್ದಾರೆ. 
"...ಈಗ ಸೃಷ್ಟಿಯಾಗಿರುವ ಬಿಕ್ಕಟ್ಟಿನ ದೃಷ್ಟಿಯಿಂದ, ಇಂದು ಎಲ್ಲ ಬೆಂಬಲಿತ ಶಾಸಕರ (ವಿಧಾನ ಸಭಾ ಸದಸ್ಯರು) ಜೊತೆಗೆ ನಿಮ್ಮನ್ನು ಭೇಟಿ ಮಾಡಲು ಅವಕಾಶ ಕೊಡಿ. ಈ ಎಲ್ಲ ಶಾಸಕರು ಸರ್ಕಾರ ರಚಿಸಲು ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ನನಗೆ ಬೆಂಬಲಿಸಿದ್ದಾರೆ" ಎಂದು ಶಶಿಕಲಾ ರಾವ್ ಅವರಿಗೆ ಹೇಳಿದ್ದಾರೆ. 
"ಸಂವಿಧಾನದ, ಪ್ರಜಾಪ್ರಭುತ್ವದ ಮತ್ತು ರಾಜ್ಯ ಹಿತಾಸಕ್ತಿಯ ಸಾರ್ವಭೌಮತ್ವವನ್ನು ಕಾಪಾಡಲು ಗೌರವಾನ್ವಿತ ರಾಜ್ಯಪಾಲರು ಕೂಡಲೇ ಮುಂದಾಗುತ್ತಾರೆ ಎಂದು ನಂಬಿದ್ದೇನೆ" ಎಂದು ಕೂಡ ಶಶಿಕಲಾ ಬರೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com