ಬೆಳ್ಳಂದೂರು ಕೆರೆಯಲ್ಲಿ ಬೆಂಕಿ: ಬಿಡಿಎ, ಬಿಡಬ್ಲ್ಯೂಎಸ್ಎಸ್ ಬಿ, ಮಾಲಿನ್ಯ ನಿಯಂತ್ರಣ ಮಂಡಳಿಗೆ ಎನ್ ಜಿಟಿ ನೋಟಿಸ್

ಬೆಂಗಳೂರಿನ ಬೆಳ್ಳಂದೂರು ಕರೆಯಲ್ಲಿ ಬೆಂಕಿ ಹೊತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ)....
ಬೆಳ್ಳಂದರೂ ಕೆರೆಯಲ್ಲಿ ದಟ್ಟ ಹೊಗೆ ಹಾಗೂ ಬೆಂಕಿ
ಬೆಳ್ಳಂದರೂ ಕೆರೆಯಲ್ಲಿ ದಟ್ಟ ಹೊಗೆ ಹಾಗೂ ಬೆಂಕಿ
Updated on: 
ನವದೆಹಲಿ: ಬೆಂಗಳೂರಿನ ಬೆಳ್ಳಂದೂರು ಕರೆಯಲ್ಲಿ ಬೆಂಕಿ ಹೊತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಬುಧವಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಜಲ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೋಟಿಸ್ ನೀಡಿದೆ.
ಬೆಳ್ಳಂದೂರು ಕೆರೆಯಲ್ಲಿ ಕಳೆದ ಗುರುವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿ ಜನರಲ್ಲಿ ಆತಂಕ ಸೃಷ್ಟಿ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಎನ್ ಜಿಟಿ ಅಧ್ಯಕ್ಷ  ನ್ಯಾ.ಸ್ವತಂತ್ರಕುಮಾರ್ ನೇತೃತ್ವದ ಪೀಠ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಈ ಸಂಬಂಧ ಬಿಡಿಎ, ಮಾಲಿನ್ಯ ನಿಯಂತ್ರಣ ಮಂಡಳಿ, ಕೆರೆ ಅಭಿವೃದ್ಧಿ ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿ ಎರಡು ವಾರಗಳೊಳಗೆ ಉತ್ತರ ನೀಡುವಂತೆ ಸೂಚಿಸಿದೆ.
ಘಟನೆಗೆ ಸಂಬಂಧಿಸಿದಂತೆ ನಾವು ತನಿಖೆಗೆ ಆದೇಶಿಸಿದ್ದೇವೆ. ಸಂಜೆ ವೇಳೆಗೆ ವರದಿ ಬರಲಿದ್ದು, ಬಳಿಕ ಕೆರೆಯಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದ ತಿಳಿಯಲಿದೆ ಎಂದು ಕೇಂದ್ರ ಪರಿಸರ ಸಚಿವ ಅನಿಲ್ ಮಾದವ್ ದಾವೆ ಅವರು ತಿಳಿಸಿದ್ದಾರೆ
ಕೆರೆ ಪುನಶ್ಚೇತನದ ಬಗ್ಗೆ ನಿರ್ಲಕ್ಷ್ಯ ತೋರಿರುವುದಕ್ಕೆ ತೀವ್ರ ಅಚ್ಚರಿ ವ್ಯಕ್ತಪಡಿಸಿದ ಎನ್ ಜಿಟಿ, ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಪ್ರಕರಣದ ವಿಚಾರಣೆಯನ್ನು ಮಾ.20ಕ್ಕೆ ಮುಂದೂಡಿದೆ.
ಈ ಹಿಂದೆ ವಿಷಪೂರಿತ ನೊರೆಯಿಂದ ಸುದ್ದಿಯಾಗಿದ್ದ ಬೆಳ್ಳಂದೂರು ಕರೆಯಲ್ಲಿ ಫೆ.16ರಂದು ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ದಟ್ಟ ಹೊಗೆ ಮತ್ತು ಬೆಂಕಿ ಆವರಿಸಿದ್ದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಎರಡು ವರ್ಷಗಳ ಹಿಂದೆ ಕೂಡ ಇದ್ದಕ್ಕಿದ್ದಂತೆ ಬೆಳ್ಳಂದೂರು ಕೆರೆಯಲ್ಲಿ ಭಾರೀ ನೊರೆ ಹಾಗೂ ಬೆಂಕಿ ಕಾಣಿಸಿಕೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com